ಸಾಮೂಹಿಕ ಅತ್ಯಾಚಾರ(ಸಾಂದರ್ಭಿಕ ಚಿತ್ರ) 
ದೇಶ

ಎಸ್‌ಪಿ ಮುಖಂಡನ ಮಗ ಸೇರಿ ಮೂವರಿಂದ ಬಾಲಕಿ ಮೇಲೆ ಅತ್ಯಾಚಾರ

ಸಮಾಜವಾದಿ ಪಕ್ಷದ ಮುಖಂಡ ತೇಕ್ಚಂದ್ ಪಾಲ್ ಪುತ್ರ ಸೇರಿ ಮೂವರು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ...

ಬದೌನ್(ಉತ್ತರಪ್ರದೇಶ): ಸಮಾಜವಾದಿ ಪಕ್ಷದ ಮುಖಂಡ ತೇಕ್ಚಂದ್ ಪಾಲ್ ಪುತ್ರ ಸೇರಿ ಮೂವರು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬದೌನ್ ನ ಕಾದರ್ ಚೌಕ್ ಬಳಿ ಜುಲೈ 18ರ ರಾತ್ರಿ ಸಮಾಜವಾದಿ ಪಕ್ಷದ ನಾಯಕ ತೇಕ್ಚಂದ್ ಪಾಲ್ ಪುತ್ರ ಓಮೇಂದ್ರ ಪಾಲ್, ನರೇಂದ್ರ ಹಾಗೂ ಸುರೇಂದ್ರ ಎಂಬುವರು 14ರ ಹರೆಯದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಮಾವಿನ ತೋಪಿಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅತ್ಯಾಚಾರ ಬಳಿಕ ಮನೆಗೆ ಬಂದ ಸಂತ್ರಸ್ತ ಬಾಲಕಿ ನಡೆದ ಘಟನೆಯನ್ನು ಪೋಷಕರ ಬಳಿ ಹೇಳಿಕೊಂಡಿದ್ದಾಳೆ. ಕೂಡಲೇ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಮೂವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ಖಚಿತವಾಗಿದೆ.

ಪ್ರಕರಣ ಸಂಬಂಧ ಆರೋಪಿ ಸುರೇಂದ್ರನನ್ನು ಬಂಧಿಸಲಾಗಿದ್ದು, ತಲೆ ಮರೆಸಿಕೊಂಡಿರುವ ಮತ್ತೀಬರು ಆರೋಪಿಗಳ ಪತ್ತೆಗೆ ಜಾಲ ರೂಪಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಯಾದವ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ