ಗುರುವಾಯೂರು ಶ್ರೀಕೃಷ್ಣ ದೇವಸ್ಥಾನ 
ದೇಶ

ಗುರುವಾಯೂರು ದೇವಸ್ಥಾನಕ್ಕೆ ಬಾಂಬ್ ಬೆದರಿಕೆ

ಕೇರಳದ ಪ್ರಸಿದ್ಧ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿರುವ ಬಗ್ಗೆ ವರದಿಯಾಗಿದೆ...

ತ್ರಿಶ್ಶೂರ್: ಕೇರಳದ ಪ್ರಸಿದ್ಧ ಗುರುವಾಯೂರು  ಶ್ರೀಕೃಷ್ಣ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿರುವ ಬಗ್ಗೆ ವರದಿಯಾಗಿದೆ. ಈ ಸಂದೇಶ ಖತ್ತರ್ ನಿಂದ ಬಂದಿರುವುದಾಗಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಗುರುವಾಯೂರ್ ನ ಸರ್ಕಲ್ ಇನ್ಸ್‌ಪೆಕ್ಟರ್‌ಗೆ ಮಂಗಳವಾರ ಬೆಳಗ್ಗೆ ಫೋನ್‌ಗೆ ಕರೆ ಮಾಡಿದ ದುಷ್ಕರ್ಮಿಗಳು 24 ಗಂಟೆಯೊಳಗೆ ದೇವಾಲಯದಲ್ಲಿ ಬಾಂಬ್ ಸ್ಫೋಟ ಮಾಡುವುದಾಗಿ ಬೆದರಿಕೆಯೊಡ್ಡಿದ್ದರು.

ಬೆದರಿಕೆ ಕರೆ ಮಾಡಿದವರು ಮಲಯಾಳಂ ಭಾಷೆಯಲ್ಲಿ ಮಾತನಾಡಿದ್ದು, ಕೆಲವರ ಮೇಲೆ ಪೊಲೀಸರು ನಿಗಾ ಇರಿಸಿದ್ದಾರೆ. ಆದಾಗ್ಯೂ, ಪೊಲೀಸ್ ತನಿಖೆ ನಡೆಯುತ್ತಿರುವ ಕಾರಣ ಹೆಚ್ಚಿನ ವಿಷಯಗಳನ್ನು ಬಹಿರಂಗ ಪಡಿಸಲು ಪೊಲೀಸರು ನಿರಾಕರಿಸಿದ್ದಾರೆ.

ಈ ಘಟನೆಯ ಹಿನ್ನೆಲೆಯಲ್ಲಿ ಗುರುವಾಯೂರ್ ದೇವಾಲಯದ ಸುತ್ತಲೂ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ದೇವಾಲಯಕ್ಕೆ ಆಗಮಿಸುವ ಭಕ್ತರನ್ನು ತೀವ್ರ ತಪಾಸಣೆಗೊಳಪಡಿಸಿದ ನಂತರವೇ ಒಳಗೆ ಬಿಡಲಾಗುತ್ತಿದೆ.


Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT