ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಇತ್ತೀಚೆಗೆ ಮೌನೇಂದ್ರ ಮೋದಿ ಆಗುತ್ತಿದ್ದಾರೆ ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಸೀತಾರಾಮ ಯೆಚೂರಿ ವ್ಯಂಗ್ಯವಾಡಿದ್ದಾರೆ.
2014 ರ ಲೋಕಸಭೆ ಚುನಾವಣೆ ವೇಳೆ ತಮ್ಮ ಭಾಷಣದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ನರೇಂದ್ರ ಮೋದಿ ಮನಮೌನ ಸಿಂಗ್ ಎಂದು ಲೇವಡಿ ಮಾಡುತ್ತಿದ್ದರು. ಆದರೆ ಈಗ ನರೇಂದ್ರ ಮೋದಿ ಅವರೇ ಮೌನೇಂದ್ರ ಮೋದಿ ಆಗುತ್ತಿದ್ದಾರೆ ಎಂದು ಹೇಳಿದ್ದಾರೆ.
ಲಲಿತ್ ಮೋದಿ ಪ್ರಕರಣದಲ್ಲಿ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ರಾಜಸ್ತಾನ ಮುಖ್ಯಮಂತ್ರಿ ವಸುಂದರಾ ರಾಜೇ ಹೆಸರು ಕೇಳಿಬರುತ್ತಿದ್ದರೂ ಪ್ರಧಾನಿ ಮೋದಿ ಇದುವರೆಗೂ ಪ್ರಕರಣ ಸಂಬಂಧ ಎಲ್ಲಿಯೂ ಪ್ರತಿಕ್ರಿಯೆ ನೀಡಿಲ್ಲ. ಒಂದು ವೇಳೆ ಪ್ರಕರಣದಲ್ಲಿ ಈ ಇಬ್ಬರ ಪಾತ್ರ ಇಲ್ಲ ಎಂದಾದರೇ ಮೋದಿ ಯಾವುದೇ ತನಿಖೆಗೆ ವಹಿಸುತ್ತಿಲ್ಲ ಏಕೆ ಎಂದು ಪ್ರಶ್ನಿಸಿದರು.
ಲಲಿತ್ ಮೋದಿ ಪ್ರಕರಣ ಸೇರಿದಂತೆ ಯಾವುದೇ ವಿಷಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ ಎಂದು ಅವರು ಆರೋಪಿಸಿದರು