ದೇಶ

ಶಿಕ್ಷಕರ ಮನೆ ಕೆಲಸ ಮಾಡಲು ನಿರಾಕರಿಸಿದ ವಿದ್ಯಾರ್ಥಿಗೆ ಶಾಲೆಯಿಂದ ಹೊರಗುಳಿಯುವ ಶಿಕ್ಷೆ!

ಶಿಕ್ಷಕರ ಮನೆ ಕೆಲಸ ಮಾಡಿಕೊಡಲು ನಿರಾಕರಿಸಿದ 10 ನೇ ತರಗತಿಯ ವಿದ್ಯಾರ್ಥಿಯನ್ನು ಶಾಲೆಯಿಂದ ಹೊರಹಾಕಲಾಗಿರುವ ಘಟನೆ ರಾಜಸ್ಥಾನದ ಸರ್ಕಾರಿ ಶಾಲೆಯಲ್ಲಿ ನಡೆದಿದೆ.

ರಾಜಸ್ಥಾನ: ಶಿಕ್ಷಕರ ಮನೆ ಕೆಲಸ ಮಾಡಿಕೊಡಲು ನಿರಾಕರಿಸಿದ 10 ನೇ ತರಗತಿಯ ವಿದ್ಯಾರ್ಥಿಯನ್ನು ಶಾಲೆಯಿಂದ ಹೊರಹಾಕಲಾಗಿರುವ ಘಟನೆ ರಾಜಸ್ಥಾನದ ಸರ್ಕಾರಿ ಶಾಲೆಯಲ್ಲಿ ನಡೆದಿದೆ.

ತಾನು 6 ನೇ ತರಗತಿಯಲ್ಲಿದ್ದಾಗಿನಿಂದಲೂ ಒತ್ತಾಯ ಪೂರ್ವಕವಾಗಿ ಮನೆ ಕೆಲಸ ಮಾಡಿಸುತ್ತಿದ್ದರು ಎಂದು ಸರ್ಕಾರಿ ಶಾಲೆಯಲ್ಲಿ 10 ನೇ ತರಗತಿ ಓದುತ್ತಿರುವ ವಿದ್ಯಾರ್ಥಿ ಲಾಲು ಸಿಂಗ್ ಹಿಂದುಸ್ತಾನ್ ಟೈಮ್ಸ್ ಗೆ ನೀಡಿರುವ ಸಂದರ್ಶನದಲ್ಲಿ ಆರೋಪಿಸಿದ್ದಾನೆ.  ತನ್ನೆಲ್ಲಾ ಸಹಪಾಠಿಗಳು ತರಗತಿಗಳಿಗೆ ಹಾಜರಾಗುತ್ತಿದ್ದಾರೆ ತಾನು ಮಾತ್ರ ಶಿಕ್ಷಕರ ಮನೆಯಲ್ಲಿ ಕೆಲಸ ಮುಗಿಸಬೇಕಿತ್ತು ಎಂದು ಲಾಲ್ ಸಿಂಗ್ ದೂರಿದ್ದಾನೆ.

ಒಂದು ವೇಳೆ ಮನೆ ಕೆಲಸ ಮಾಡಲು ನಿರಾಕರಿಸಿದರೆ ಶಿಕ್ಷಕರು ಥಳಿಸುತ್ತಿದ್ದರು. ಮನೆ ಕೆಲಸ ಮಾಡಲು ನಿರಾಕರಿಸಿದ್ದು ಮರುಕಳಿಸಿದ ಹಿನ್ನೆಲೆಯಲ್ಲಿ ಜು.13 ರಂದು ನನ್ನನ್ನು ಪ್ರಾಂಶುಪಾಲರ ನೆರವಿನಿಂದ ಶಾಲೆಯಿಂದ ಹೊರಹಾಕಲಾಗಿದೆ ಎಂದು ಲಾಲ್ ಸಿಂಗ್ ಹೇಳಿದ್ದಾನೆ.     
ಆದರೆ ಈ ಆರೋಪವನ್ನು ನಿರಾಕರಿಸಿರುವ ಶಾಲಾ ಆಡಳಿತ ಮಂಡಳಿ, ವಿದ್ಯಾರ್ಥಿಯ ಕೆಟ್ಟ ವರ್ತನೆಯಿಂದ ಆತನನ್ನು ಶಾಲೆಯಿಂದ ಹೊರಹಾಕಲಾಗಿದೆ ಎಂದು ಉತ್ತರಿಸಿದೆ.ಈ ಘಟನೆ ಬಗ್ಗೆ ಪ್ರಕರಣ ದಾಖಲಾಗಿದ್ದು ಜಿಲ್ಲಾ ಶಿಕ್ಷಣ ಇಲಾಖೆಯಿಂದ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಸಮ್ಮತಿ, ಲೀಟರ್‌ಗೆ 8 ರೂ. ಏರಿಕೆ?

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ