ನರೇಂದ್ರ ಮೋದಿ 
ದೇಶ

ಬಹಿರಂಗ ಹೇಳಿಕೆ ಪ್ರಧಾನಿ ಮೋದಿ ಕೆಂಡಾಮಂಡಲ

ಬಿಜೆಪಿ ಸಂಸದ ಶಾಂತಾಕುಮಾರ್ ಪಕ್ಷದ ಅಧ್ಯಕ್ಷ ಅಮಿತ್ ಶಾಗೆ ಬರೆದ ಪತ್ರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೋಪೋದ್ರಿಕ್ತರನ್ನಾಗಿಸಿದೆ ಎಂದು ಹೇಳಲಾಗಿದೆ...

ನವದೆಹಲಿ: ಬಿಜೆಪಿ ಸಂಸದ ಶಾಂತಾಕುಮಾರ್ ಪಕ್ಷದ ಅಧ್ಯಕ್ಷ ಅಮಿತ್ ಶಾಗೆ ಬರೆದ ಪತ್ರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೋಪೋದ್ರಿಕ್ತರನ್ನಾಗಿಸಿದೆ ಎಂದು ಹೇಳಲಾಗಿದೆ.

ಪಕ್ಷದ ಸಂಸದರು ಮತ್ತು ನಾಯಕರು ಯಾವುದೇ ರೀತಿಯ ಬಹಿರಂಗ ಹೇಳಿಕ ನೀಡುವ ಮುನ್ನ ವರಿಷ್ಠರ ಗಮನಕ್ಕೆ ತರಬೇಕೆಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಹಲವು ಹಗರಣಗಳನ್ನು ಮೂಲವನ್ನಾಗಿರಿಸಿಕೊಂಡು ಪ್ರತಿಪಕ್ಷಗಳು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನ ಮಾಡುತ್ತಿವೆ.

ಅದಕ್ಕೆ ಪೂರಕವಾಗಿ ಪಕ್ಷದ ನಾಯಕರೂ ಅಂಥ ಪ್ರಯತ್ನ ಮಾಡಬಾರದು ಎಂದು ನಾಯಕರಿಗೆ ಮೋದಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆಂದು ಮೂಲಗಳನ್ನು ಉಲ್ಲೇಖಿಸಿ ಎನ್‍ಡಿಟಿವಿ ಬುಧವಾರ ವರದಿ ಮಾಡಿದೆ. ವ್ಯಾಪಂ ಹಗರಣಕ್ಕೆ ಸಂಬಂಧಪಟ್ಟಂತೆ  ಮಧ್ಯಪ್ರದೇಶ ಸಿಎಂ ಚೌಹಾಣ್ ಹಾಗೂ ಲಲಿತ್  ಮೋದಿ ಪ್ರಕರಣದಲ್ಲಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಮತ್ತು ರಾಜಸ್ತಾನ್ ಸಿಎಂ ವಸುಂಧರಾ ರಾಜೇ ಅವರ ರಾಜಿನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಮತ್ತಿತರ ಪ್ರತಿಪಕ್ಷಗಳು ಸಂಸತ್ತಿನಲ್ಲಿ ಕಲಾಪಕ್ಕೆ ಅಡ್ಡಿಪಡಿಸುತ್ತಿರುವ ಹಿನ್ನೆಲೆಯಲ್ಲಿ ಮೋದಿ ಈ ಸಭೆ ಏರ್ಪಡಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ