ಹಿಮಾಚಲಪ್ರದೇಶ: ನದಿಗೆ ಉರುಳಿದ ಬಸ್, 6 ಸಾವು
ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ಗುರುವಾರ ಖಾಸಗಿ ಟೂರಿಸ್ಟ್ ಬಸ್ವೊಂದು ನದಿಗೆ ಉರುಳಿ ಬಿದ್ದ ಪರಿಣಾಮ ಆರು ಪ್ರಯಾಣಿಕರು ಮೃತಪಟ್ಟಿದ್ದು,...
ಕುಲ್ಲು: ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ಗುರುವಾರ ಖಾಸಗಿ ಟೂರಿಸ್ಟ್ ಬಸ್ವೊಂದು ನದಿಗೆ ಉರುಳಿ ಬಿದ್ದ ಪರಿಣಾಮ ಆರು ಪ್ರಯಾಣಿಕರು ಮೃತಪಟ್ಟಿದ್ದು, 12 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಂಜಾಬ್ನ ಬರ್ನಾಲ ನಗರದಿಂದ ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್, ಚಾಲಕನ ನಿಯಂತ್ರಣ ತಪ್ಪಿ ಪಾರ್ವತಿ ನದಿಗೆ ಉರುಳಿ ಬಿದ್ದಿದೆ. ಬಸ್ಸಿನಲ್ಲಿ ಸುಮಾರು 50-55 ಜನ ಪ್ರಯಾಣಿಸುತ್ತಿದ್ದರು ಎನ್ನಲಾಗುತ್ತಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭುಂತರ್-ಮಣಿಕರನ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಈಗಾಗಲೇ ನದಿಯಿಂದ ಆರು ಮೃತದೇಹಗಳನ್ನು ಹೊರ ತೆಗೆಯಲಾಗಿದು ಮತ್ತು ರಕ್ಷಣಾ ಕಾರ್ಯ ಮುಂದುವರೆದಿದೆ ಎಂದು ಭುಂತರ್ ಜಿಲ್ಲಾಧಿಕಾರಿ ರಾಕೇಶ್ ಕನ್ವಾರ್ ಅವರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.