ರಾಬರ್ಟ್ ವಾದ್ರಾ ವಿರುದ್ಧ ನಿಲುವಳಿ ಸೂಚನೆಗೆ ಸಂಸತ್ ನಿರ್ಧಾರ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ವಿರುದ್ಧ ನಿಲುವಳಿ ಸೂಚನೆಗೆ ಸಂಸತ್ ಸಮ್ಮತಿಸಿದೆ.
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ವಿರುದ್ಧ ನಿಲುವಳಿ ಸೂಚನೆಗೆ ಸಂಸತ್ ಸಮ್ಮತಿಸಿದೆ.
ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ರಾಬರ್ಟ್ ವಾದ್ರಾ ಸಂಸದರ ವಿರುದ್ಧ ಕಾಮೆಂಟ್ಸ್ ಹಾಕಿದ್ದರ ಹಿನ್ನೆಲೆಯಲ್ಲಿ ನಿಲುವಳಿ ಸೂಚನೆಗೆ ಪಾರ್ಲಿಮೆಂಟ್ ಒಪ್ಪಿದೆ. ಸಂಸತ್ ಕಲಾಪ ಆರಂಭವಾಗುತ್ತಿದ್ದಂತೆ ಸಂಸದರು ತಮ್ಮ ರಾಜಕೀಯ ತಂತ್ರಗಾರಿಕೆ ಮೂಲಕ ಸದನದ ಗಮನವನ್ನು ಬೇರೆಡೆ ಸೆಳೆಯಲು ಸಣ್ಣಸಣ್ಣ ತಂತ್ರಗಳನ್ನು ಅನುಸರಿಸುತ್ತಾರೆ. ಭಾರತದ ನಾಗರಿಕರು ಮೂರ್ಖರಲ್ಲ. ಇಂಥ ನಾಯಕರು ದೇಶವನ್ನಾಳುತ್ತಿರುವುದು ವಿಷಾಧನೀಯ ಎಂದು ತಮ್ಮ ಪೇಸ್ ಬುಕ್ ನಲ್ಲಿ ಕಾಮೆಂಟ್ ಹಾಕಿದ್ದಾರೆ.
ಪ್ರಜಾಪ್ರಭುತ್ವ ಆಡಳಿತವಿರುವ ಭಾರತದಲ್ಲಿ ನಾಯಕರು ನಡೆಸುತ್ತಿರುವ ಸರ್ವಾಧಿಕಾರಿ ಧೋರಣೆ ವಿರುದ್ಧ ಹೋರಾಟ ನಡೆಸಬೇಕು ಎಂದಿದ್ದಾರೆ.
ಕಳೆದ ಮೂರು ದಿನಗಳಿಂದ ಲಲಿತ್ ಮೋದಿ ಪ್ರಕರಣ ಸಂಬಂಧ ಸಂಸತ್ ಮುಂಗಾರು ಅಧಿವೇಶನದ ಕಲಾಪವನ್ನು ಮುಂದೂಡುತ್ತಿರುವ ಹಿನ್ನೆಲೆಯಲ್ಲಿ ಈ ರೀತಿಯ ಕಾಮೆಂಟ್ ಹಾಕಿಕೊಂಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.