ನವದೆಹಲಿ:ತನ್ನ ವಿರುದ್ಧ ಗಲ್ಲು ಶಿಕ್ಷೆ ವಿಧಿಸಿರುವುದನ್ನು ರದ್ದುಗೊಳಿಸುವಂತೆ ಕೋರಿ ಯಾಕುಬ್ ಮೆಮನ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರ ಕೈಗೆತ್ತಿಕೊಳ್ಳಲಿದೆ.
ಹಿರಿಯ ವಕೀಲ ಟಿ.ಆರ್. ಅಂದ್ಯರುಜಿನ ಅವರು ಈ ವಿಷಯವನ್ನು ನ್ಯಾಯಪೀಠದ ಮುಂದೆ ಪ್ರಸ್ತಾಪಿಸಿದಾಗ, ''ನಾನು ಇದರ ವಿಚಾರಣೆಯನ್ನು ಈಗಾಗಲೇ ನ್ಯಾಯಪೀಠಕ್ಕೆ ಒಪ್ಪಿಸಿದ್ದೇನೆ. ಸೋಮವಾರ ವಿಚಾರಣೆ ನಡೆಸಲಿದೆ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಚ್.ಎಲ್. ದತ್ತು ತಿಳಿಸಿದ್ದಾರೆ.
1993ರ ಮುಂಬೈ ಸರಣಿ ಬಾಂಬ್ ಸ್ಪೋಟದಲ್ಲಿ ಅಪರಾಧಿ ಎಂದು ಸಾಬೀತಾದ ಹಿನ್ನೆಲೆಯಲ್ಲಿ ಯಾಕುಬ್ ಮೆಮನ್ ಗೆ ಜುಲೈ 30ರಂದು ಗಲ್ಲು ಶಿಕ್ಷೆ ವಿಧಿಸಲಾಗಿದೆ.