ಶ್ರೀನಗರದಲ್ಲಿ ಇಂದು ಗ್ರೆನೇಡ್ ದಾಳಿಗೆ ಒಳಗಾದ ಏರ್ ಸೆಲ್ ಶೋರೂಂ 
ದೇಶ

ಟೆಲಿಕಾಂ ಶೋರೂಂ ಮೇಲೆ ಉಗ್ರರ ಗ್ರೆನೇಡ್ ದಾಳಿ

ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರ ಸಿಟಿಯ ಮಧ್ಯಭಾಗದಲ್ಲಿರುವ ಏರ್ ಸೆಲ್ ಮತ್ತು ...

ಶ್ರೀನಗರ: ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರ ಸಿಟಿಯ ಮಧ್ಯಭಾಗದಲ್ಲಿರುವ ಏರ್ ಸೆಲ್ ಮತ್ತು ವೊಡಾಫೋನ್ ಮೊಬೈಲ್ ಕಂಪೆನಿ ಶೋರೂಂ ಮೇಲೆ ಶಂಕಿತ ಉಗ್ರರು ಶುಕ್ರವಾರ ಗ್ರೆನೇಡ್ ದಾಳಿ ನಡೆಸಿದ್ದಾರೆ.

ಕೆಲವೇ ನಿಮಿಷಗಳ ಅಂತರದಲ್ಲಿ ಈ ದಾಳಿ ನಡೆದಿದ್ದು, ಘಟನೆಯಲ್ಲಿ ಯಾರೊಬ್ಬರಿಗೂ ಗಾಯಗಳಾಗಿಲ್ಲ.

ಇಬ್ಬರು ಅಪರಿಚಿತ ಯುವಕರು ಇಂದು ಬೆಳಗ್ಗೆ 11.30ರ ಸುಮಾರಿಗೆ ಶ್ರೀನಗರದ ಕರಣ್ ನಗರದಲ್ಲಿರುವ ಏರ್ ಸೆಲ್ ಕಚೇರಿಗೆ ನುಗ್ಗಿ ಅಲ್ಲಿ ಕೆಲಸ ಮಾಡುತ್ತಿದ್ದ ನೌಕರರನ್ನು ಹೊರಗೆ ಹೋಗುವಂತೆ ಸೂಚಿಸಿದರು. ಕಂಪೆನಿಯ ಆವರಣದೊಳಗೆ ಗ್ರೆನೇಡ್ ಎಸೆದು ಅಲ್ಲಿಂದ ಓಡಿ ಹೋಗಿದ್ದಾರೆ.ನಂತರ ಅಲ್ಲಿಂದ 500 ಮೀಟರ್ ದೂರದಲ್ಲಿರುವ ವೊಡಫೋನ್ ಶೋರೂಂನ ಮೇಲೆಯೂ ಯುವಕರು ದಾಳಿ ನಡೆಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಉಗ್ರಗಾಮಿಗಳು ಕಳೆದ ಮೇ ತಿಂಗಳಿನಲ್ಲಿ ಉತ್ತರ ಕಾಶ್ಮೀರದ ಸೊಪೊರೆ ಪಟ್ಟಣದಲ್ಲಿ ಮತ್ತು ಪಟ್ಟನ್ ಎಂಬಲ್ಲಿ  ಮೊಬೈಲ್ ಕಂಪೆನಿಗಳ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!