ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅರವಿಂದ ಕೇಜ್ರಿವಾಲ್ 
ದೇಶ

ದೆಹಲಿಯಂತೆ ಬಿಹಾರದಲ್ಲೂ ಬಿಜೆಪಿ ಸೋಲನುಭವಿಸಲಿದೆ: ಕೇಜ್ರಿವಾಲ್

ದೆಹಲಿ ಚುನಾವಣೆಯಂತೆಯೇ ಬಿಹಾರ ಚುನಾವಣೆಯಲ್ಲೂ ಬಿಜೆಪಿ ಸೋಲನುಭವಿಸಲಿದೆ ಎಂದು ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರು ಶುಕ್ರವಾರ ಹೇಳಿದ್ದಾರೆ...

ನವದೆಹಲಿ; ದೆಹಲಿ ಚುನಾವಣೆಯಂತೆಯೇ ಬಿಹಾರ ಚುನಾವಣೆಯಲ್ಲೂ ಬಿಜೆಪಿ ಸೋಲನುಭವಿಸಲಿದೆ ಎಂದು ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರು ಶುಕ್ರವಾರ ಹೇಳಿದ್ದಾರೆ.

ಈ ಕುರಿತಂತೆ ದೆಹಲಿಯಲ್ಲಿ ನಡೆದ ಈದ್ ಮಿಲನ್ ಸಮಾರಂಭ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಈ ಹಿಂದೆ ನಡೆದ ಎಲ್ಲಾ ಚುನಾವಣೆಯಲ್ಲೂ ಬಿಜೆಪಿ ಗೆದ್ದಿರಬಹುದು. ಆದರೆ, ಇನ್ನು ಮುಂದೆ ನಡೆಯುವ ಬಿಹಾರ ಚುನಾವಣೆಯಲ್ಲಿ ದೆಹಲಿಯಂತೆ ಸೋಲನುಭವಿಸಲಿದೆ. ದೆಹಲಿಯಂತೆಯೇ ಬಿಹಾರದಲ್ಲೂ ಬದಲಾವಣೆಯಾಗಲಿದೆ ಎಂದು ಹೇಳಿದ್ದಾರೆ.

ಕೆಲವು ರಾಜಕೀಯ ನಾಯಕರು ಧರ್ಮದ ಹೆಸರು ಹೇಳಿಕೊಂಡು ಪ್ರಚಾರ ಮಾಡುತ್ತಿದ್ದು, ಅಂತಹ ವ್ಯಕ್ತಿಗಳು ಇದೀಗ ರಾಜಕೀಯ ರಂಗದಲ್ಲಿ ವಿಷಕಾರಿ ವ್ಯಕ್ತಿಗಳಾಗಿದ್ದಾರೆ. ರಾಜಕೀಯದಲ್ಲಿ ವಿಷಬಿತ್ತುವ ಕೆಲಸ ಮಾಡುವವರಿಗಿಂತ ಪ್ರೀತಿ, ವಿಶ್ವಾಸದಿಂದ ಕೆಲಸ ಮಾಡುವವರು ನಮಗೆ ಬೇಕಿದ್ದಾರೆ. ಅಧಿಕಾರಕ್ಕೆ ಬಂದಾಗ ನಾವು ನೀಡಿದ್ದ ಎಲ್ಲಾ ಭರವಸೆಗಳನ್ನು ನಿಧಾನಗತಿಯಲ್ಲಿ ಈಡೇರಿಸುತ್ತಿದ್ದೇವೆ. ಬಜೆಟ್ ನಲ್ಲಿ ಮಕ್ಕಳ ಶಿಕ್ಷಣಕ್ಕಾಗಿ ಸಾಕಷ್ಟು ಹಣಕಾಸನ್ನು ಮೀಸಲಿರಿಸಿದ್ದೇವೆ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದರೆ ಅಮೆರಿಕ ದೇಶವನ್ನು ಹಿಂದಿಕ್ಕಬಹುದು. ಹಾಗಾಗಿಯೇ ಇದೀಗ ಶಿಕ್ಷಣಕ್ಕಾಗಿ ಮೀಸಟ್ಟಿರುವ ಹಣವನ್ನು ದುಪ್ಪಟ್ಟು ಮಾಡುವ ಯೋಜನೆಗಳನ್ನು ರೂಪಿಸಲಾಗುತ್ತಿದ್ದು, 45 ಸರ್ಕಾರಿ ಶಾಲೆಗಳನ್ನು ಆರಂಭ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ಇದೇ ವೇಳೆ ಬಿಜೆಪಿ ವಿರುದ್ಧ ಕಿಡಿಕಾರಿರುವ ಅವರು, ದೆಹಲಿಯಲ್ಲಿ ನಾವು ಯಾವುದೇ ಕೆಲಸ ಮಾಡಲು ಹೊರಟರೂ ಅದಕ್ಕೆ ವಿರೋಧ ಪಕ್ಷಗಳು ತಡೆಯೊಡ್ಡುತ್ತಿದೆ. ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ಆದರೆ, ಆ ಕೆಲಸಗಳು ಅನುಷ್ಠಾನಗೊಳ್ಳುವುದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬಿಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

'ದೆಹಲಿ ಪೊಲೀಸರು ಟಾಸ್ ಗೆದ್ದು, ಮೊದಲು ಬ್ಯಾಟಿಂಗ್ ಮಾಡಲಿ': ಪಾಕಿಸ್ತಾನ ಮಾಜಿ ಕ್ರಿಕೆಟಿಗನ ಪೋಸ್ಟ್ ವೈರಲ್​!

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP