ನರೇಂದ್ರ ಮೋದಿ 
ದೇಶ

ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ: ಪ್ರಧಾನಿ ಮೋದಿ

ದೇಶದ ಅಭಿವೃದ್ಧಿಗೆ ರಾಜ್ಯಗಳ ಅಭಿವೃದ್ಧಿ ಬಹಳ ಮುಖ್ಯ. ರಾಜ್ಯಗಳ ಪ್ರಗತಿಯೊಂದಿಗೆ ದೇಶದ ಪ್ರಗತಿ ಶುರುವಾಗುತ್ತದೆ. ಕೇಂದ್ರ ಹಾಗೂ ರಾಜ್ಯಗಳು ಒಟ್ಟಾಗಿ...

ಪಾಟ್ನಾ: ದೇಶದ ಅಭಿವೃದ್ಧಿಗೆ ರಾಜ್ಯಗಳ ಅಭಿವೃದ್ಧಿ ಬಹಳ ಮುಖ್ಯ. ರಾಜ್ಯಗಳ ಪ್ರಗತಿಯೊಂದಿಗೆ ದೇಶದ ಪ್ರಗತಿ ಶುರುವಾಗುತ್ತದೆ. ಕೇಂದ್ರ ಹಾಗೂ ರಾಜ್ಯಗಳು ಒಟ್ಟಾಗಿ ಕೆಲಸ ಮಾಡಿದರೆ ಅಭಿವೃದ್ಧಿ ದೂರವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಬಿಹಾರ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಬಹು ನಿರೀಕ್ಷಿತ ಪಾಟ್ನಾ ಐಐಟಿ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಶನಿವಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಎಲ್ಲ ಸಮಸ್ಯೆಗಳಿಗೂ ಅಭಿವೃದ್ಧಿಯೇ ಉತ್ತರ. ಬಡತನ, ಅನಕ್ಷರತೆ ವಿರುದ್ಧ ಹೋರಾಡಬೇಕಾದ್ರೆ ದೇಶದ ಅಭಿವೃದ್ಧಿಯಾಗಬೇಕಿದೆ ಎಂದರು.

ಆದರೆ ರಾಜಕೀಯ ದೇಶದ ಪ್ರಗತಿಗೆ ಅಡ್ಡಗಾಲು ಹಾಕುತ್ತಿದೆ. ನಾನು ನಿತೀಶ್‌ಜಿ ಅವರ ಮಾತನ್ನು ಒಪ್ಪುತ್ತೇನೆ. ರಾಜ್ಯದ ಯೋಜನೆಗಳು ನಿಧಾನವಾಗಿದ್ದು ಸತ್ಯ. ಏಕೆಂದರೆ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿಯವರ ಸರ್ಕಾರದ ನಂತರ ಕೇಂದ್ರದಲ್ಲಿ ಸರ್ಕಾರ ಬದಲಾಗಿತ್ತು ಎಂದು ಹೆಸರು ಹೇಳದೆ ಯುಪಿಎ ನೇತೃತ್ವದ ಕೇಂದ್ರದಲ್ಲಿ ಆಳಿದ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದರು.

ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಬದ್ಧ ವೈರಿಗಳು
76 ಸಾವಿರ ಕೋಟಿ ವೆಚ್ಚದ ದೀನದಯಾಳ್‌ ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆಗೆ ಪಾಟ್ನಾದಲ್ಲಿ ಚಾಲನೆ ನೀಡುವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಇಬ್ಬರೂ ಒಂದೇ ವೇದಿಕೆಯನ್ನು ಹಂಚಿಕೊಂಡರು.

ದನಿಯಾವ-ಬಿಹಾರ್‌ಶರೀಫ್‌ ರೈಲ್ವೆ ಹಳಿ ಹಾಗೂ ಪಾಟ್ನಾ-ಮುಂಬಯಿ ಎಸಿ ಎಕ್ಸ್‌ಪ್ರೆಸ್‌ ರೈಲಿಗೂ ಹಸಿರು ನಿಶಾನೆ ತೋರಿದರು. ಬಳಿಕ ಪಾಟ್ನಾ ಐಐಟಿ ಉದ್ಘಾಟನೆಯನ್ನೂ ನೆರವೇರಿಸಿದರು. 10 ಸಾವಿರ ಕೋಟಿ ವೆಚ್ಚದ  ಜಗದೀಶ್‌ಪುರ-ಹಲ್ದಿಯಾ ಅನಿಲ ಸಾಗಣೆ ಕೊಳವೆ ಮಾರ್ಗಕ್ಕೂ ಮೋದಿ ಚಾಲನೆ ನೀಡಿದರು.

ನರೇಂದ್ರ ಮೋದಿ ಅವರನ್ನು ಬಿಜೆಪಿಯ ಪ್ರಧಾನಿ ಅಭ್ಯರ್ಥಿ ಎಂದು ಹೇಳಿದ ತಕ್ಷಣ 17 ವರ್ಷಗಳ ಮೈತ್ರಿಯನ್ನು ಕಡೆದುಕೊಂಡು ನಿತೀಶ್ ಕುಮಾರ್ ಬಿಜೆಪಿಯಿಂದ ದೂರವಾಗಿದ್ದರು. ಇದೀಗ ಬಿಜೆಪಿ ಜೆಡಿಯು ಬದ್ಧ ವೈರಿಗಳಾಗಿದ್ದಾರೆ. ಕೆಲವೇ ತಿಂಗಳಲ್ಲಿ ಬಿಹಾರದಲ್ಲಿ ವಿಧಾನಸಭೆ ಚುನಾವಣೆಗಳು ನಡೆಯಲಿದ್ದು, ಎರಡು ಪಕ್ಷಗಲು ಭರಪೂರ ಭರವಸೆಗಳನ್ನು ಮತದಾರರಿಗೆ ನೀಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!