ಸಾಂಕೇತಿಕ ಚಿತ್ರ 
ದೇಶ

15 ವರ್ಷದ ಬಾಲಕನಿಂದ ಕಿರುಕುಳ: ಆತ್ಮಹತ್ಯೆ ಮಾಡಿಕೊಂಡ 10 ನೇ ತರಗತಿ ವಿದ್ಯಾರ್ಥಿನಿ

15 ವರ್ಷದ ಬಾಲಕ ನೀಡುತ್ತಿದ್ದ ಕಿರುಕುಳದಿಂದ ಮನನೊಂದ 10 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಥಾಣೆ: 15 ವರ್ಷದ ಬಾಲಕ ನೀಡುತ್ತಿದ್ದ ಕಿರುಕುಳದಿಂದ ಮನನೊಂದ 10 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮಹಾರಾಷ್ಟ್ರದ ಥಾಣೆಯಲ್ಲಿ ಈ ಘಟನೆ ನಡೆದಿದ್ದು ಬಾಲಕನ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ತನ್ನ ಸಂಬಂಧಿಕರ ಮನೆಯಲ್ಲಿದ್ದುಕೊಂಡು 10 ತರಗತಿಯೊಂದಿಗೆ ಕಂಪ್ಯೂಟರ್ ಕೋರ್ಸ್ ಸಹ ಕಲಿಯುತ್ತಿದ್ದಳು ಎಂದು ತಿಳಿದುಬಂದಿದೆ.

ಶಹಾಪುರ ತಾಲೂಕಿನ ಯುವಕನೊಬ್ಬ ವಿದ್ಯಾರ್ಥಿನಿಯ ನಂಬರ್ ಪಡೆದು ಕರೆ ಮಾಡಿ ಕಿರುಕುಳ ನೀಡುತ್ತಿದ್ದ ವಿಷಯ ಆತ್ಮಹತ್ಯೆ ಮಾಡಿಕೊಂಡ ಹಲವು ದಿನಗಳ ಬಳಿಕ ಬೆಳಕಿಗೆ ಬಂದಿದೆ. ಇದಕ್ಕೂ ಮುನ್ನ ಅಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಈಗ ಕಿರುಕುಳ ನೀಡಿದ್ದ ಯುವಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಯುವತಿ ಆತ್ಮಹತ್ಯೆ ಮಾಡಿಕೊಂಡ ಹಲವು ದಿನಗಳ ಬಳಿಕ, ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ವಿಷಯ ಪೋಷಕರಿಗೆ ತಿಳಿದಿದೆ. ದೂರವಾಣಿ ಮೂಲಕ ಪದೇ ಪದೇ ಪೀಡಿಸುತಿದ್ದ ಯುವಕನ ವಿರುದ್ಧ ಸೆಕ್ಷನ್ 306 , 507  ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT