ದೇಶ

ಯೂಕೂಬ್ ಮೆಮನ್ ಕ್ಷಮಾದಾನ ಅರ್ಜಿಗೆ ಕೇಂದ್ರ ವಿರೋಧ

Mainashree

ನವದೆಹಲಿ: 1993ರ ಮುಂಬೈ ಸರಣಿ ಸ್ಫೋಟದ ಅಪರಾಧಿ ಯಾಕೂಬ್ ಮೆಮನ್‌ ಕ್ಷಮಾದಾನ ಅರ್ಜಿಗೆ ಕೇಂದ್ರ ವಿರೋಧ ವ್ಯಕ್ತಪಡಿಸಿದೆ.

ಮರಣದಂಡನೆ ಪ್ರಶ್ನಿಸಿ ಯಾಕೂಬ್ ಮೆಮನ್ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದನು. ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರ, ಯಾಕೂಬ್ ಮೆಮನ್ ಗೆ ಯಾವುದೇ ಕಾರಣಕ್ಕೂ ಕ್ಷಮೆ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದೆ.

ಮರಣದಂಡನೆ ಪ್ರಶ್ನಿಸಿ ಯಾಕೂಬ್ ಮೆಮನ್ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದನು. ಇದರ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರಕ್ಕೆ ಮುಂದೂಡಿತ್ತು.
ಹಲವು ಗಣ್ಯರು ಯಾಕೂಬ್‌ಗೆ ವಿಧಿಸಲಾಗಿರುವ ಮರಣದಂಡನೆಯನ್ನು ಮರುಪರಿಶೀಲಿಸಬೇಕೆಂದು ಆಗ್ರಹಿಸಿದ್ದರು.

ಅಲ್ಲದೆ ಸುಪ್ರೀಂಕೋರ್ಟ್ ಯಾಕೂಬ್‌ನ ಕ್ಯುರೇಟಿವ್ ಅರ್ಜಿ ತಿರಸ್ಕರಿಸಲು ತೆಗೆದುಕೊಂಡ ನಿರ್ಣಯದ ಬಗ್ಗೆಯೂ ಪ್ರಶ್ನಿಸಿಕೊಂಡಿದ್ದು ಇಂದು ಯಾವುದೇ ನಿರ್ಧಾರ ಪ್ರಕಟಿಸದೇ ನಾಳೆಗೆ ವಿಚಾರಣೆಯನ್ನು ಮುಂದೂಡಲಾಗಿದೆ.

1993ರ ಮುಂಬಯಿ ಸರಣಿ ಸ್ಫೋಟ ಪ್ರಕರಣದ ಆರೋಪಿಗಳನ್ನು ದೋಷಿಗಳೆಂದು ನಿರ್ಧರಿಸಿಯಾಗಿದೆ. ಈ ಸಂದರ್ಭದಲ್ಲಿ ಅದರ ಪರಿಶೀಲನೆ ಸಾಧ್ಯವಿಲ್ಲ, ಎಂದು ಕೋರ್ಟ್ ಸ್ಪಷ್ಟಪಡಿಸಿತ್ತು.

SCROLL FOR NEXT