ಗುವಾಹತಿ: ಕೇಂದ್ರದ ಮಾಜಿ ಸಚಿವ, ಆರು ಬಾರಿ ಲೋಕಸಭಾ ಸದಸ್ಯರಾಗಿದ್ದ ಬಿಜೋಯ್ ಕೃಷ್ಣ ಹಂಡಿಕ್ (82) ಭಾನುವಾರ ಕೊನೆಯುಸಿರೆಳೆದರು.
ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಜೋರ್‍ಹಟ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯ ತೀವ್ರ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಶನಿವಾರವಷ್ಟೇ ತುರ್ತು ನಿಗಾಘಟಕಕ್ಕೆ ಸ್ಥಳಾಂತರಿಸಲಾಗಿತ್ತು. ಮೃತರಿಗೆ ಪತ್ನಿ, ಮೂವರು ಪುತ್ರಿಯರು ಇದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಅಸ್ಸಾಂ ಮುಖ್ಯಮಂತ್ರಿ ತರುಣ್ ಗೊಗೊಯ್ ಸೇರಿದಂತೆ ಪ್ರಮುಖರು ಶೋಕ ವ್ಯಕ್ತಪಡಿಸಿದ್ದಾರೆ.