ಭದ್ರತಾ ಸಿಬ್ಬಂದಿ 
ದೇಶ

ಪಂಜಾಬ್‌ನಲ್ಲಿ ಉಗ್ರರ ದಾಳಿ, ಉನ್ನತ ಮಟ್ಟದ ಸಭೆ ಕರೆದ ರಾಜನಾಥ್ ಸಿಂಗ್

ಪಂಜಾಬ್‌ನ ಗುರುದಾಸ್‌ಪುರದಲ್ಲಿ ನಡೆದ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಉನ್ನತ ಮಟ್ಟದ ಸಭೆ ಕರೆದಿದ್ದಾರೆ.

ನವದೆಹಲಿ: ಪಂಜಾಬ್‌ನ ಗುರುದಾಸ್‌ಪುರದಲ್ಲಿ ನಡೆದ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಉನ್ನತ ಮಟ್ಟದ ಸಭೆ ಕರೆದಿದ್ದಾರೆ.

ದಹೆಲಿಯಲ್ಲಿ ಕೆಲ ಹೊತ್ತಿನಲ್ಲೇ ಉನ್ನತ ಮಟ್ಟದ ಸಭೆ ಆರಂಭವಾಗಲಿದ್ದು, ರಾಷ್ಟ್ರೀಯ ಭದ್ರತಾ ಪಡೆ(ಎನ್‌ಎಸ್‌ಜಿ) ರಾ ಹಾಗೂ ಗುಪ್ತಚಲ ಇಲಾಖೆಯ ಮುಖ್ಯಸ್ಥರ ಜೊತೆ ಪಂಜಾಬ್ ಪರಿಸ್ಥಿತಿ ಕುರಿತು ರಾಜನಾಥ್ ಸಿಂಗ್ ಚರ್ಚಿಸಲಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿರುವ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಅವರು, ಉಗ್ರರು ದಾಳಿ ನಡೆಸಿರುವ ಪೊಲೀಸ್ ಠಾಣೆ ಬಳಿಯಿಂದ ಕ್ಷಣಕ್ಷಣದ ಮಾಹಿತಿ ಪಡೆಯುತ್ತಿದ್ದು, ಉಗ್ರರು ಜನರನ್ನು ಒತ್ತೆ ಇರಿಸಿರುವ ಸಾಧ್ಯತೆ ಕಡಿಮೆ ಎಂದು ಹೇಳಿದ್ದಾರೆ.

ದೀನಾನಗರಪೊಲೀಸ್ ಠಾಣೆಯ ಬಳಿ ಈಗಾಗಲೇ ಹೈಅಲಟ್ ಘೋಷಿಸಲಾಗಿದೆ. ಆದರೆ ಎಷ್ಟು ಜನ ಉಗ್ರರಿದ್ದಾರೆ ಎಂಬುದರ ಬಗ್ಗೆ ನಿಖರ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.

ಮೂಲಗಳ ಪ್ರಕಾರ ಪಂಜಾಬ್ ದೀನನಗರ್ ಪೊಲೀಸ್ ಠಾಣೆಯ ಬಳಿ ಬಿಳಿ ಆಲ್ಟೋ ಕಾರಿನಲ್ಲಿ ಸೇನಾ ಉಡುಪು ಧರಿಸಿ ಸುಸಜ್ಜಿತ ಶಸ್ತ್ರಾಸ್ತ್ರಗಳೊಂದಿಗೆ ಬಂದ ಬಂದೂಕು ದಾರಿಗಳು ಠಾಣೆ ಸುತ್ತುವರೆದಿದ್ದಾರೆ. ನಂತರ ಇದ್ದಕ್ಕಿದ್ದಂತೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಘಟನೆಯಲ್ಲಿ ಇದೀಗ 5 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಶಾಲೆಗಳಿಗೆ ಯೂಟ್ಯೂಬರ್‌ಗಳು, ಸೋಷಿಯಲ್ ಮೀಡಿಯಾ ಮಂದಿಗೆ ನೋ ಎಂಟ್ರಿ: ಉತ್ತರ ಪ್ರದೇಶ ಸರ್ಕಾರದ ಖಡಕ್ ಆದೇಶ

'ಬಿಜೆಪಿಗೆ ಖುಷಿ ಕೊಡುವ ಹೇಳಿಕೆ ನೀಡಬೇಡಿ': Rahul Gandhi ಕುರಿತ ಕಾಂಗ್ರೆಸ್ ಸಂಸದ ಶಶಿತರೂರ್ ಹೇಳಿಕೆಗೆ KC ವೇಣುಗೋಪಾಲ್ ಖಡಕ್ ವಾರ್ನಿಂಗ್

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!