ನವದೆಹಲಿ: ಪಂಜಾಬ್ ನ ಗುರ್ದಾಪುರ್ ಜಿಲ್ಲೆಯಲ್ಲಿ ಉಗ್ರರ ದಾಳಿ ನಡೆದಿರುವ ಬೆನ್ನಲ್ಲೇ ಗೃಹ ಸಚಿವ ರಾಜನಾಥ್ ಸಿಂಗ್ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ.
ಭಾರತ ಪಾಕಿಸ್ತಾನದೊಂದಿಗೆ ಸ್ನೇಹ- ಸೌಹಾರ್ದ ಸಂಬಂಧವನ್ನು ಬಯಸುತ್ತದೆ ಆದರೆ ಭಾರತದ ರಾಷ್ಟ್ರೀಯ ಹಿತಾಸಕ್ತಿಯನ್ನು ಬದಿಗಿರಿಸಿ ಪಾಕಿಸ್ತಾನದೊಂದಿಗೆ ಸ್ನೇಹ ಮುಂದುವರೆಸಲು ಸಾಧ್ಯವಿಲ್ಲ ಎಂದು ನೇರವಾಗಿ ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.
ನಾವು ಮೊದಲು ದಾಳಿ ಮಾಡುವುದಿಲ್ಲ ಆದರೆ ನಮ್ಮ ಮೇಲೆ ದಾಳಿ ನಡೆದರೆ ಶತೃಗಳಿಗೆ ಯೋಗ್ಯವಾದ ಉತ್ತರ ನೀಡುತ್ತೇವೆ ಎಂದು ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಭಾರತ ಸ್ನೇಹ ಸಂಬಂಧ ಮುಂದುವರೆಸಲು ಸಿದ್ಧವಾಗಿದ್ದರೂ ಪಾಕಿಸ್ತಾನವೇಕೆ ಭಾರತದ ಗಡಿ ಪ್ರದೇಶದಲ್ಲಿ ಪದೇ ಪದೇ ಭಯೋತ್ಪಾದಕ ದಾಳಿ ನಡೆಸುತ್ತಿದೆ ಎಂಬುದು ಅರ್ಥವಾಗುತ್ತಿಲ್ಲ. ಪಾಕಿಸ್ತಾನದೊಂದಿಗೆ
ಪಂಜಾಬ್ ನ ಗುರ್ದಾಸಪುರ್ ಜಿಲ್ಲೆಯಲ್ಲಿ ನಡೆದ ಉಗ್ರಗಾಮಿ ದಾಳಿ ಹಿನ್ನೆಲೆಯಲ್ಲಿ ಭಾರತ-ಪಾಕಿಸ್ತಾನ ಗಡಿ ಭಾಗದಲ್ಲಿ ಭದ್ರತಾ ಪಡೆ ಕಾವಲನ್ನು ಹೆಚ್ಚಿಸಲು ಈಗಾಗಲೇ ಸೂಚನೆ ನೀಡಲಾಗಿದೆ.