ದೆಹಲಿಯ ರಾಜಾಜಿ ಮಾರ್ಗದಲ್ಲಿರುವ ನಿವಾಸದಲ್ಲಿ ಕಲಾಂಗೆ ಅಂತಿಮ ನಮನ ಸಲ್ಲಿಸಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ 
ದೇಶ

ಕಲಾಂ ಗೆ ರಾಷ್ಟ್ರಪತಿ, ಪ್ರಧಾನಿ, ಗಣ್ಯರಿಂದ ಅಂತಿಮ ನಮನ

ದೆಹಲಿಯ ರಾಜಾಜಿ ಮಾರ್ಗದಲ್ಲಿರುವ ಕಲಾಂ ನಿವಾಸ ದಲ್ಲಿ ರಾಷ್ಟ್ರಪತಿ, ಪ್ರಧಾನಿ, ಸೇರಿದಂತೆ ಹಲವು ಗಣ್ಯರಿಂದ ಅಂತಿಮ ನಮನ

ನವದೆಹಲಿ: ನಿನ್ನೆ ಮೇಘಾಲಯದ ಶಿಲ್ಲಾಂಗ್ ನಲ್ಲಿ ವಿಧಿವಶರಾದ ಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಪಾರ್ಥಿವ ಶರೀರವನ್ನು  ಪಾಲಂ ವಿಮಾನ ನಿಲ್ದಾಣಕ್ಕೆ ದೆಹಲಿಯ ರಾಜಾಜಿ ಮಾರ್ಗದಲ್ಲಿರುವ ಕಲಾಂ ನಿವಾಸಕ್ಕೆ ತರಲಾಯಿತು. 

ಪಾರ್ಥಿವ ಶರೀರ ಕಲಾಂ ನಿವಾಸಕ್ಕೆ ಆಗಮಿಸುತ್ತಿದ್ದಂತೆಯೇ ಸೇನಾ ಯೋಧರು ಅಂತಿಮ ನಮನ ಸಲ್ಲಿಸಿದರು. ನಂತರ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಪ್ರಧಾನಿ ನರೇಂದ್ರ ಮೋದಿ, ಕ್ರಿಕೆಟಿಗ, ರಾಜ್ಯಸಭಾ ಸದಸ್ಯ  ಸಚಿನ್ ತೆಂಡೂಲ್ಕರ್, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ, ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಸೇರಿದಂತೆ ಹಲವು ಗಣ್ಯರು ಕಲಾಂ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.   

ಇದಕ್ಕೂ ಮುನ್ನ ಅಸ್ಸಾಂನ ಗುವಾಹಟಿಯಿಂದ ವಾಯುಪಡೆಯ ವಿಶೇಷಾ ವಿಮಾನದಲ್ಲಿ ಕಲಾಂ ಅವರ ಪಾರ್ಥಿವ ಶರೀರವನ್ನು ದೆಹಲಿ ಪಾಲಂ ವಿಮಾನ ನಿಲ್ದಾಣದಲ್ಲಿ ತರಲಾಗಿತ್ತು. ವಿಮಾನ ನಿಲ್ದಾಣದಲ್ಲಿ  ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಪಾರ್ಥಿವ ಶರೀರವನ್ನು ಸ್ವೀಕರಿಸಿದರು. ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹಾಗೂ ಮೂರು ಸೇನಾಪಡೆಗಳ ಮುಖ್ಯಸ್ಥರು ಅಗಲಿದ ಭಾರತ ರತ್ನಕ್ಕೆ ಅಂತಿಮ ನಮನ ಸಲ್ಲಿಸಿದ್ದರು. ಸಂಜೆ 4 ಗಂಟೆಯಿಂದ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಜು.30 ರಂದು ರಾಮೇಶ್ವರಂನಲ್ಲೇ ಅಂತ್ಯ ಸಂಸ್ಕಾರ
: ಅಬ್ದುಲ್ ಕಲಾಂ ಅವರ ಹುಟ್ಟೂರಾದ ತಮಿಳುನಾಡಿನ ರಾಮೇಶ್ವರಂನಲ್ಲಿಯೇ ಸಕಲ ಸರ್ಕಾರಿ ಗೌರವಗಳೊಂದಿಗೆ ಗುರುವಾರ ಬೆಳಗ್ಗೆ 10-30ಕ್ಕೆ ಧನುಷ್ಕೋಟಿ ರಸ್ತೆಯ ಸರ್ಕಾರಿ ಜಮೀನಿನಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕೇಂದ್ರ ಸರ್ಕಾರ ಪ್ರಕಟಿಸಿದೆ.

83 ವರ್ಷದ ಅಬ್ದುಲ್ ಕಲಾಂ ನಿನ್ನೆ ಶಿಲ್ಲಾಂಗ್ ನ ಐಐಎಂ ನಲ್ಲಿ ಉಪನ್ಯಾಸ ನೀಡುತ್ತಿರಬೇಕಾದರೆ ಏಕಾಏಕಿ ಕುಸಿದುಬಿದ್ದಿದ್ದರು. ಈ ವೇಳೆ ಆರೋಗ್ಯದಲ್ಲಿ ತೀವ್ರ ವ್ಯತ್ಯಾಸ ಕಂಡುಬಂದಿತ್ತು. ಕೂಡಲೇ ಅವರನ್ನು ಶಿಲ್ಲಾಂಗ್ ನ ಬೆಥೇನಿ ಆಸ್ಪತ್ರೆಯ ಐಸಿಯುಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರು ಕೊನೆಯುಸಿರೆಳೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!