ಸಂಗ್ರಹ ಚಿತ್ರ 
ದೇಶ

ಉಗ್ರರ ದಾಳಿ: ಜಮ್ಮು ಕಾಶ್ಮೀರದಲ್ಲಿ ಬಿಗಿ ಭದ್ರತೆ

ಪಂಜಾಬ್ ನಲ್ಲಿ ಉಗ್ರರು ದಾಳಿ ನಡೆಸಿದ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ಸರ್ಕಾರ ಜಮ್ಮು ಕಾಶ್ಮೀರ ಗಡಿಯಲ್ಲಿ ಬಿಗಿ...

ಜಮ್ಮು: ಪಂಜಾಬ್ ನಲ್ಲಿ ಉಗ್ರರು ದಾಳಿ ನಡೆಸಿದ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ಸರ್ಕಾರ ಜಮ್ಮು ಕಾಶ್ಮೀರ ಗಡಿಯಲ್ಲಿ ಬಿಗಿ ಭದ್ರತೆ ಕಲ್ಪಿಸಿದೆ.

ಜಮ್ಮುಕಾಶ್ಮೀರದ ಸಾಂಬ, ಕತುವಾ ಜಿಲ್ಲೆಗಳಲ್ಲಿ ಭಾರತೀಯ ಸೇನೆ ಭದ್ರತೆ ಬಿಗಿಗೊಳಿಸಿದೆ. ಅಲ್ಲದೇ, ಪಾಕಿಸ್ತಾನಕ್ಕೆ ಹೊಂದಿಕೊಂಡಿರುವ ದೇಶದ ಗಡಿಯುದ್ದಕ್ಕೂ ಭಾರತೀಯ ಸೇನೆ ಕಟ್ಟೆಚ್ಚರ ವಹಿಸಿದ್ದು, ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಹೆಚ್ಚುವರಿ ಸೇನಾ ತುಕಡಿಗಳನ್ನು ನಿಯೋಜಿಸಲಾಗಿದೆ.

ಗಡಿ ಭಾಗದಲ್ಲಿರುವ ನಾಗರಿಕರು ಯಾರಾದರೂ ಅನುಮಾನಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಮಾಹಿತಿ ನೀಡುವಂತೆ ಗಡಿ ಭಾಗದಲ್ಲಿರುವ ಗ್ರಾಮಸ್ಥರಲ್ಲಿ ಹಿರಿಯ ಪೊಲೀಸ್ ಅಧಿಕಾರಿ ಸುಜಿತ್ ಕುಮಾರ್ ಮನವಿ ಮಾಡಿದ್ದು, ಹೆಚ್ಚಿನ ಚೆಕ್ ಪಾಯಿಂಟ್ ನಿಯೋಜಿಸಲಾಗಿದ್ದು, ಭದ್ರತಾ ಸಿಬ್ಬಂದಿಗಳು ಜಮ್ಮುವಿನಿಂದ ಪಥನ್ ಕೋಟ್ ಗೆ ಸೇರುವ ಹೆದ್ದಾರಿಯಲ್ಲಿ ಗಸ್ತಿನಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

ಅಮರನಾಥ ಯಾತ್ರೆಗೆ ಭಕ್ತಾದಿಗಳು ಹೆಚ್ಚಾಗಿ ತೆರಳುತ್ತಿದ್ದು, ಆ ಪ್ರದೇಶದ ಸುತ್ತಮುತ್ತಲೂ ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದ ಅವರು ಭಾಗವತಿ ನಗರ್ ಸುತ್ತಾಮುತ್ತಾ ಹೆಚ್ಚಿನ ಮಟ್ಟದಲ್ಲಿ ಭದ್ರತಾ ಸಿಬ್ಬಂದಿಗಳುನ್ನು ನಿಯೋಜಿಸಲಾಗಿದೆ ಎಂದು ಹೇಳಿದ್ದಾರೆ.

ಈ ವರ್ಷದಲ್ಲಿ ಕತುವಾ ಮತ್ತು ಸಾಂಬಾದಲ್ಲಿ ಎರಡು ಬಾರಿ ಉಗ್ರರು ದಾಳಿ ಮಾಡಿದ್ದರು. ಮಾರ್ಚ್ 20ರಂದು ಪೊಲೀಸ್ ಠಾಣೆ ಮೇಲೆ ಉಗ್ರರು ದಾಳಿ ಮಾಡಿದ ಪರಿಣಾಮ 5 ಮಂದಿ ಮೃತಪಟ್ಟಿದ್ದರು. ಮಾರ್ಚ್ 21ರಂದು ಜಮ್ಮು-ಪಥನ್ ಕೋಟ್ ಹೆದ್ದಾರಿಯಲ್ಲಿ ಸೇನಾ ಶಿಬಿರದ ಮೇಲೆ ದಾಳಿ ಮಾಡಿದ ಪರಿಣಾಮ ಸೇನಾ ಸಿಬ್ಬಂದಿ ಮತ್ತು ನಾಗರಿಕರು ಗಾಯಗೊಂಡಿದ್ದರು. ಆದರೆ, ಎರಡು ಘಟನೆಯಲ್ಲಿ ಉಗ್ರರನ್ನು ಹತ್ಯೆಗೈಯಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!