ನವದೆಹಲಿ: 1993ರ ಮುಂಬೈ ಸರಣಿ ಸ್ಫೋಟದ ಅಪರಾಧಿ ಯಾಕೂಬ್ ಮೆಮನ್‌ಗೆ ಜುಲೈ 30ರಂದು ಜಾರಿಯಾಗಬೇಕಿದ್ದ ಗಲ್ಲುಶಿಕ್ಷೆಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ ನೀಡಿದೆ.
ಗಲ್ಲುಶಿಕ್ಷೆ ಪ್ರಶ್ನಿಸಿ ಯಾಕೂಬ್ ಮೆಮನ್ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದನು. ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ದ್ವಿಸದಸ್ಯ ಪೀಠ ಗಲ್ಲುಶಿಕ್ಷೆಗೆ ತಾತ್ಕಾಲಿಕ ತಡೆ ನೀಡಿದ್ದು, ಅರ್ಜಿ ವಿಚಾರಣೆಯನ್ನು ಮೂವರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಾಪೀಠಕ್ಕೆ ವರ್ಗಾವಣೆ ಮಾಡಲಾಗಿದೆ.
ದ್ವಿಸದಸ್ಯ ಪೀಠದ ನ್ಯಾಯಾಧೀಶರ ನಡುವೆ ಭಿನ್ನಾಭಿಪ್ರಾಯ ಉಂಟಾದ ಹಿನ್ನಲೆಯಲ್ಲಿ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನ ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಲಾಗಿದ್ದು, ಯಾಕೂಬ್ ಮೆಮನ್ ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದಂತಾಗಿದೆ.
ವಿಚಾರಣೆ ವರ್ಗಾಯಿಸಿರುವ ಪೀಠ ಅರ್ಜಿ ಇತ್ಯರ್ಥವಾಗುವವರೆಗೆ ಮಾತ್ರ ಗಲ್ಲುಶಿಕ್ಷೆಗೆ ತಡೆ ನೀಡಲಾಗಿದೆ ಎಂದು ಸ್ಪಷ್ಟನೇ ನೀಡಿದೆ.