ಶ್ರೀನಗರ: ಪ್ಯಾರಾಮಿಲಿಟರಿ ಜವಾನರನ್ನು ಗುರಿಯಾಗಿಸಿಕೊಂಡು ಜಮ್ಮುವಿನ ಅನಂತ್‌ನಾಗ್ ಜಿಲ್ಲೆಯಲ್ಲಿ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ಗ್ರೆನೇಡ್ ದಾಳಿಗೆ ನಾಲ್ವರು ಸೈನಿಕರು ಮತ್ತು ನಾಲ್ವರು ನಾಗರೀಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಳೆದ ಒಂದು ವಾರದಲ್ಲಿ ಎರಡು ಬಾರಿ ಉಗ್ರರು ದಾಳಿ ನಡೆಸಿದ್ದು, ಉಗ್ರರ ಕೃತ್ಯದ ನಂತರ ಸ್ಥಳಕ್ಕೆ ಹೆಚ್ಚುವರಿ ಪಡೆಗಳನ್ನು ಕರೆಸಿಕೊಳ್ಳಲಾಗಿದೆ. ಗ್ರೆನೇಡ್ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿರುವವವರನ್ನು ಸೇನಾ ಆಸ್ಪತ್ರಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜುಲೈ 25 ರಂದು ಉಗ್ರರ ಗ್ರೆನೇಡ್ ದಾಳಿಯಲ್ಲಿ ಓರ್ವ ಐಸ್‌ಕ್ರೀಮ್ ವ್ಯಾಪಾರಿಯೊಬ್ಬರು ಸಾವನ್ನಪ್ಪಿದ್ದು, ಐದು ಮಂದಿಗೆ ಗಾಯಗಳಾಗಿತ್ತು.