ಥಾಣೆಯಲ್ಲಿ ಕಟ್ಟಡ ಕುಸಿದು ಬಿದ್ದಿರುವುದು (ಕೃಪೆ: ಎಎನ್ಐ) 
ದೇಶ

ಥಾಣೆ: ಕಟ್ಟಡ ಕುಸಿದು 6 ಸಾವು

ಥಾಣೆಯ ಥಕೂರ್ಲಿ ಎಂಬಲ್ಲಿ ಎರಡು ಮಹಡಿಯ ಕಟ್ಟಡ ಕುಸಿದು 6 ಮಂದಿ ಸಾವಿಗೀಡಾಗಿದ್ದು, 10 ಮಂದಿಗೆ ಗಾಯಗಳಾಗಿದೆ ಎಂದು ವರದಿಯಾಗಿದೆ....

ಥಾಣೆ:  ಥಾಣೆಯ ಥಕೂರ್ಲಿ ಎಂಬಲ್ಲಿ ಎರಡು ಮಹಡಿಯ ಕಟ್ಟಡ ಕುಸಿದು 6 ಮಂದಿ ಸಾವಿಗೀಡಾಗಿದ್ದು, 10 ಮಂದಿಗೆ ಗಾಯಗಳಾಗಿದೆ ಎಂದು ವರದಿಯಾಗಿದೆ.

ಘಟನಾ ಸ್ಥಳಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿ ಆರ್‌ಎಫ್) ಧಾವಿಸಿದ್ದು, ಅಲ್ಲಿ ಇನ್ನೂ 6 ಮಂದಿ ಕಟ್ಟಡದೊಳಗೆ ಸಿಲುಕಿಕೊಂಡಿದ್ದಾರೆ ಎಂದು  ಎನ್‌ಡಿಆರ್‌ಎಫ್ ಅಧಿಕಾರಿ ಸಚ್ಚಿದಾನಂದ ಗಾವ್‌ಡೆ ಹೇಳಿದ್ದಾಕೆ.

ಅಗ್ನಿಶಾಮಕ ದಳದ 12 ವಾಹನಗಳು ಘಟನಾ  ಸ್ಥಳಕ್ಕೆ ಧಾವಿಸಿದ್ದು, 15 ಮಂದಿಯನ್ನು ರಕ್ಷಿಸಿದ್ದಾರೆ.

ಸುಮಾರು 30 ವರ್ಷಗಳ ಹಿಂದಿನ ಕಟ್ಟಡ ಇದಾಗಿದ್ದು ಮಂಗಳವಾರ ರಾತ್ರಿ 10.15ಕ್ಕೆ ಕುಸಿದು ಬಿದ್ದಿತ್ತು.

ಇಲ್ಲಿ ಸುಮಾರು 20 ಕುಟುಂಬಗಳು ವಾಸವಾಗಿದ್ದು, ಈ ಹಿಂದೆಯೇ ಕಟ್ಟಡ ಬಿರುಕು ಬಿಟ್ಟಿತ್ತು ಎಂದು ಹೇಳಲಾಗುತ್ತಿದೆ.

ಭಾರೀ ಮಳೆಯಿಂದಾಗಿ ವಿದ್ಯುತ್ ಸಂಪರ್ಕ ಕಡಿತಗೊಂಡಿರುವ ಕಾರಣ ರಕ್ಷಣಾ ಕಾರ್ಯಾಚರಣೆಗೆ ತಡೆಯುಂಟಾಗಿದೆ ಎಂದು ಬಲ್ಲಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ