ಕೊಮೆನ್ ಚಂಡಮಾರುತ 
ದೇಶ

ಕೊಮೆನ್ ಚಂಡಮಾರುತಕ್ಕೆ ಬಾಂಗ್ಲಾ-ಮಾಯನ್ಮಾರ್ ನಲ್ಲಿ 33 ಸಾವು, 6 ಮಂದಿ ನಾಪತ್ತೆ

ಬಾಂಗ್ಲಾದೇಶ ಕರಾವಳಿಗೆ ''ಕೊಮೆನ್'' ಚಂಡಮಾರುತ ಅಪ್ಪಳಿಸಿದೆ. ಇದರ ಪ್ರಭಾವದಿಂದಾಗಿ 2 ದಿನಗಳಲ್ಲಿ ಪಶ್ಚಿಮ ಬಂಗಾಳ, ಒಡಿಶಾದಲ್ಲಿ ಧಾರಾಕಾರ ಮಳೆಯಾಗಲಿದೆ...

ನವದೆಹಲಿ: ಬಾಂಗ್ಲಾದೇಶ ಹಾಗೂ ಮಾಯನ್ಮಾರ್ ಗೆ ''ಕೊಮೆನ್'' ಚಂಡಮಾರುತ ಅಪ್ಪಳಿಸಿದ್ದು, ಪರಿಣಾಮ 33 ಜನರು ಸಾವನ್ನಪ್ಪಿದ್ದು, 6 ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಇದರ ಪ್ರಭಾವದಿಂದಾಗಿ 2 ದಿನಗಳಲ್ಲಿ ಪಶ್ಚಿಮ ಬಂಗಾಳ, ಒಡಿಶಾದಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕೊಲ್ಕತ್ತದ ಪೂರ್ವ ಆಗ್ನೇಯ ದಿಕ್ಕಿನಿಂದ 300 ಕಿ.ಮೀ ದೂರದಲ್ಲಿ ರಚನೆಯಾಗಿರುವ ಕೊಮೆನ್, ಬಾಂಗ್ಲಾದೇಶದಲ್ಲಿ ಭಾರಿ ಮಳೆ ಸುರಿಸಿ, ಕ್ರಮೇಣ ಕ್ಷೀಣವಾಗಿ ಪಶ್ಚಿಮ ವಾಯುವ್ಯ ದಿಕ್ಕಿನತ್ತ ಸಾಗಲಿದೆ. ''ಕೆಲ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇನ್ನು ಕೆಲ ಪ್ರದೇಶಗಳಲ್ಲಿ ಭಾರಿ ಮತ್ತು ಪ್ರಬಲ ಮಳೆಯಾಗಲಿದೆ. ಪಶ್ಚಿಮ ಬಂಗಾಳದಲ್ಲಿ ಇನ್ನೆರಡು ದಿನಗಳ ಕಾಲ ಭಾರಿ ಮತ್ತು ಅತ್ಯಂತ ಪ್ರಬಲ ಮಳೆಯಾಗುವ ಸಾಧ್ಯತೆಗಳಿವೆ.

ಒಡಿಶಾದ ಕೆಲ ಭಾಗ ಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಹೀಗಾಗಿ, ಒಡಿಶಾದ 5 ಜಿಲ್ಲೆಗಳಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ. ಅಲ್ಲದೆ, ಜಾರ್ಖಂಡ್‍ನಲ್ಲೂ ಚಂಡಮಾರುತದ ಪರಿಣಾಮವಾಗಿ ಮಳೆಯಾಗಲಿದೆ. ಪಶ್ಚಿಮ ಬಂಗಾಳದಲ್ಲಿ 26 ಸಾವಿರ ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ'' ಎಂದು ಹವಾಮಾನ ಇಲಾಖೆ ತಿಳಿಸಿದೆ. ಗಂಟೆಗೆ 70 ಕಿ.ಮಿ  ವೇಗದಲ್ಲಿ ಸುತ್ತುತ್ತಿರುವ ಚಂಡಮಾರುತದಿಂದಾಗಿ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

SCROLL FOR NEXT