ಮಣಿಪುರ: ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಉಂಟಾದ ಭೂ ಕುಸಿತದಲ್ಲಿ ಸುಮಾರು 23 ಮಂದಿ ಮೃತಪಟ್ಟಿರುವ ಘಟನೆ ಮಣಿಪುರದ ಚಾಂದೇಲ್ ಜಿಲ್ಲೆಯಲ್ಲಿ ಸಂಭವಿಸಿದೆ.
ರಕ್ಷಣಾ ಪಡೆ ರವಾನಿಸಿದ್ದು ನಾಳೆ ಮುಂಜಾನೆ ವೇಳೆಗೆ ಸ್ಥಳಕ್ಕೆ ಸೇರುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಮಯನ್ಮಾರ್ ಗಡಿಯ ಜಾಮೋಲ್ ಎಂಬ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ.
ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಪ್ರಮುಖ ಸೇತುವೆಗಳು, ರಾಷ್ಟ್ರೀಯ ಹೆದ್ದಾರಿಗಳು, ಸಂಪೂರ್ಣವಾಗಿ ಜಲಾವೃತಗೊಂಡಿದ್ದು ಪ್ರಮುಖ ರಸ್ತೆಗಳ ಸಂಪರ್ಕ ಕಡಿದು ಹೋಗಿದೆ ಎಂದು ಸ್ಥಳೀಯ ಆಡಳಿತ ತಿಳಿಸಿದೆ.
ಹಲವು ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು ಮಳೆ ಇನ್ನು ಮುಂದುವರಿದರೆ ಪ್ರವಾಹ ಪರಿಸ್ಥಿತಿ ಎಂದುರಾಗಲಿದೆ ಎಂದು ಜಿಲ್ಲಾಡಳಿತ ಮುನ್ನೆಚ್ಚರಿಕೆ ನೀಡಿದೆ. ಇನ್ನು ಆಕ್ರೋಶಗೊಂಡಿರುವ ಸ್ಥಳೀಯರು ಸರಿಯಾದ ಮೂಲಭೂತ ಸೌಕರ್ಯ ಕಲ್ಪಿಸದಿರುವುದಕ್ಕೆ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.