ನವದೆಹಲಿ: ಭಾರತದ ಮೇಲೆ ಇಸಿಸ್ ಉಗ್ರರ ದಾಳಿ ಭೀತಿ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಶನಿವಾರ 12 ರಾಜ್ಯಗಳ ಪೊಲೀಸ್ ಮಹಾನಿರ್ದೇಶಕರ ಸಭೆ ಕರೆದಿದೆ.
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಇಂದು ಮಧ್ಯಾಹ್ನ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಕರ್ನಾಟಕ, ಆಂಧ್ರಪ್ರದೇಶ ತೆಲಂಗಾಣ, ಪಶ್ಚಿಮ ಬಂಗಾಳ ಸೇರಿದಂತೆ 12 ರಾಜ್ಯಗಳ ಪೊಲೀಸ್ ಮಹಾನಿರ್ದೇಶಕರು ಭಾಗವಹಿಸುತ್ತಿದ್ದಾರೆ.
ನಿನ್ನೆ ಲಿಬಿಯಾದಲ್ಲಿ ಇಸಿಸ್ ಉಗ್ರರು ಇಬ್ಬರು ಕನ್ನಡಿಗರು ಸೇರಿದಂತೆ ನಾಲ್ವರು ಭಾರತೀಯರನ್ನು ಅಪಹರಿಸಿದ್ದರು. ಬಳಿಕ ಉಗ್ರರು ಇಬ್ಬರು ಕನ್ನಡಗರನ್ನು ಬಿಡುಗಡೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಂದಿನ ಡಿಜಿಪಿಗಳ ಸಭೆ ಮಹತ್ವ ಪಡೆದುಕೊಂಡಿದ್ದು, ಸಭೆಯಲ್ಲಿ ಇಸಿಸ್ ಉಗ್ರರ ದಾಳಿ ತಡೆಯುವ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ.