ಗಲ್ಲು ಶಿಕ್ಷೆಗೆ ಗುರಿಯಾದ ಉಗ್ರ ಯಾಕೂಬ್ ಮೆಮನ್ 
ದೇಶ

ಉಗ್ರ ಮೆಮನ್ ಪತ್ನಿಗೆ ರಾಜ್ಯಸಭೆಗೆ ಸ್ಥಾನ ನೀಡುವ ಹೇಳಿಕೆ:ಮಹಮದ್ ಫಾರೂಕ್ ಸಸ್ಪೆಂಡ್

1993ರ ಮುಂಬಯಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾದ ಉಗ್ರ ಯಾಕೂಬ್ ಮೆಮನ್ ಪತ್ನಿಗೆ ರಾಜ್ಯಸಭೆಯಲ್ಲಿ ಸದಸ್ಯೆ ಸ್ಥಾನ ...

ಮುಂಬಯಿ: 1993ರ ಮುಂಬಯಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾದ ಉಗ್ರ ಯಾಕೂಬ್ ಮೆಮನ್ ಪತ್ನಿಗೆ ರಾಜ್ಯಸಭೆಯಲ್ಲಿ ಸದಸ್ಯೆ ಸ್ಥಾನ ನೀಡಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಮಹಾರಾಷ್ಟ್ರ ಸಮಾಜವಾದಿ ಪಕ್ಷದ ಉಪಾಧ್ಯಕ್ಷ ಮೊಹಮದ್ ಫಾರೂಕ್ ಘೋಶಿ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.

ಈ ಸಂಬಂಧ ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಗೆ ಪತ್ರ ಬರೆದಿದ್ದ ಮೊಹಮದ್ ಫಾರೂಕ್ ತಮ್ಮಪಕ್ಷದಿಂದ ಯಾಕೂಬ್ ಪತ್ನಿ ರಾಹೀನ್ ರನ್ನು ರಾಜ್ಯಸಭಾ ಸದಸ್ಯೆಯನ್ನಾಗಿ ಮಾಡಬೇಕೆಂದು ಬೇಡಿಕೆಯಿಟ್ಟಿದ್ದರು. ಪಕ್ಷದ ಯಾವುದೇ ಮುಖಂಡರ ಜೊತೆ ಸಮಾಲೋಚಿಸದೆ ಮುಲಾಯಂ ಸಿಂಗ್ ಯಾದವ್ ಅವರಿಗೆ ಪತ್ರ ಬರೆದಿದ್ದರು.

ನಾಗಪುರ ಕೇಂದ್ರ ಕಾರಾಗೃಹದಲ್ಲಿ ಯಾಕೂಬ್ ಮೆಮನ್ ನನ್ನು ಗಲ್ಲಿಗೇರಿಸಿದ ನಂತರ ಫಾರೂಕ್ ಈ ಪತ್ರ ಬರೆದಿದ್ದರು. ಯಾಕೂಬ್ ಪತ್ನಿ ರಾಹೀನ್ ಮುಗ್ಧೆ ಹಾಗೂ ಅಸಹಾಯಕಿ. ಹಲವು ವರ್ಷಗಳ ಕಾಲ ಆಕೆ ಸೆರೆವಾಸದಲ್ಲಿದ್ದಳು. ಇಂದಿನ ಆಕೆಯ ಸ್ಥಿತಿ ನೋಡಿ ನನಗೆ ಬೇಸರವಾಗಿದೆ. ಹೀಗಾಗಿ ರಾಜ್ಯಸಭೆಯಲ್ಲಿ ಸಂಸದ್ ಸದಸ್ಯೆಯನ್ನಾಗಿ ಮಾಡಬೇಕು. ಆ ಮೂಲಕ ಅಸಹಾಯಕರ ಪರ ದನಿ ಎತ್ತುವಂತೆ ಮಾಡಬೇಕು ಎಂದು ಪತ್ರದಲ್ಲಿ ಬರೆದಿದ್ದರು ಎನ್ನಲಾಗಿದೆ.

ಪಕ್ಷದ ರಾಜ್ಯಾಧ್ಯಕ್ಷ ಅಬು ಅಸೀಂ ಅಜ್ಮಿ ಹೇಳಿಕೆ ಬಗ್ಗೆ ವಿವರಣೆ ನೀಡುವಂತೆ ತಿಳಿಸಿದ್ದಾರೆ, ಇನ್ನು ಫಾರೂಕ್ ಹೇಳಿಕೆಗೆಗೂ ಪಕ್ಷದ ನಿಲುವಿಗೂ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ,

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel