ಸಾಂದರ್ಭಿಕ ಚಿತ್ರ 
ದೇಶ

ಉ.ಪ್ರದೇಶದಲ್ಲಿ ಗ್ರಾಮದ ಮುಖ್ಯಸ್ಥ, ಸಹಚರನಿಂದ ಯುವತಿ ಮೇಲೆ ಗ್ಯಾಂಗ್‌ರೇಪ್

ಗ್ರಾಮದ ಮುಖ್ಯಸ್ಥನೊಬ್ಬ ತನ್ನ ಸಹಚರನೊಂದಿಗೆ ಸೇರಿ 20 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಉತ್ತರ...

ಮುಜಾಫ‌ರನಗರ: ಗ್ರಾಮದ ಮುಖ್ಯಸ್ಥನೊಬ್ಬ ತನ್ನ ಸಹಚರನೊಂದಿಗೆ ಸೇರಿ 20 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಯುವತಿ ಯಾವುದೋ ಕೆಲಸಕ್ಕಾಗಿ ಗ್ರಾಮದ ಮುಖ್ಯಸ್ಥ ಫ‌ರ್ಜಾಂದ್‌ ಅಲಿಯ ಮನೆಗೆ ತೆರಳಿದ್ದಾಗ ಈ ಘಟನೆ ನಡೆದಿದ್ದು, ಅಲಿ ತನ್ನ ಸಹಚರ ಇಶ್ರಾರ್‌ ಅಹ್ಮದ್‌ ಜತೆಗೂಡಿ ಯುವತಿ ಮೇಲೆ ಅತ್ಯಾಚಾರ ನಡೆಸಿದ್ದಾನೆಎಂದು ಆರೋಪಿಸಿ ಯುವತಿಯ ತಂದೆ ದೂರು ನೀಡಿರುವುದಾಗಿ ಕೈರಾನಾ ಪೊಲೀಸ್‌ ಠಾಣಾಧಿಕಾರಿ ಬಿ.ಪಿ.ಸಿಂಗ್ ಅವರು ತಿಳಿಸಿದ್ದಾರೆ.

ಅತ್ಯಾಚಾರದ ವಿಷಯ ಯಾರಿಗಾದರೂ ತಿಳಿಸಿದರೆ ಕೊಂದು ಬಿಡುವುದಾಗಿ ಯುವತಿಗೆ ಅಲಿ ಬೆದರಿಕೆ ಹಾಕಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಅತ್ಯಾಚಾರಿಗಳ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದು, ನಾಪತ್ತೆಯಾಗಿರುವ ಅಲಿ ಹಾಗೂ ಆತನ ಸಹಚರನಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ ಎಂದು ಸಿಂಗ್‌ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್