ಅಮೆರಿಕ ಬಾಲಕಿಗೆ ಲೈಂಗಿಕ ಕಿರುಕುಳ: ಪಾದ್ರಿಗೆ 15 ವರ್ಷ ಶಿಕ್ಷೆ ಸಾಧ್ಯತೆ (ಸಾಂದರ್ಭಿಕ ಚಿತ್ರ) 
ದೇಶ

ಅಮೆರಿಕ ಬಾಲಕಿಗೆ ಲೈಂಗಿಕ ಕಿರುಕುಳ: ಪಾದ್ರಿಗೆ 15 ವರ್ಷ ಶಿಕ್ಷೆ ಸಾಧ್ಯತೆ

ಅಮೆರಿಕ ಮಿನ್ನೆಸೋಟಾ ರಾಜ್ಯದ 16 ವರ್ಷದ ಅಪ್ರಾಪ್ತ ಬಾಲಕಿ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಮೂಲದ ಪಾದ್ರಿ (60) ರೆ.ಜೋಸೆಫ್ ಪಳನಿವೇಳ್ ಜಯಪಾಲ್ ತನ್ನ ತಪ್ಪು ಒಪ್ಪಿಕೊಂಡಿದ್ದು, 15 ವರ್ಷಗಳ ಕಾಲ ಶಿಕ್ಷೆಯಾಗುವ ಸಂಭವವಿದೆ...

ವಾಷಿಂಗ್ಟನ್: ಅಮೆರಿಕ ಮಿನ್ನೆಸೋಟಾ ರಾಜ್ಯದ 16 ವರ್ಷದ ಅಪ್ರಾಪ್ತ ಬಾಲಕಿ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಮೂಲದ ಪಾದ್ರಿ (60) ರೆ.ಜೋಸೆಫ್ ಪಳನಿವೇಳ್ ಜಯಪಾಲ್ ತನ್ನ ತಪ್ಪು ಒಪ್ಪಿಕೊಂಡಿದ್ದು, 15 ವರ್ಷಗಳ ಕಾಲ ಶಿಕ್ಷೆಯಾಗುವ ಸಂಭವವಿದೆ.

2005 ರಲ್ಲಿ ಪಾದ್ರಿ ರೆ.ಜೋಸೆಫ್ ಪಳನಿವೇಳ್ ಜಯಪಾಲ್ ಅವರು ಅಮೆರಿಕದ 16 ವರ್ಷದ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಗುರಿಯಾಗಿದ್ದರು. ಅವರ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪಾದ್ರಿಯನ್ನು ಅಮೆರಿಕಾ ಭಾರತಕ್ಕೆ ಗಡೀಪಾರು ಮಾಡಿತ್ತು. ನಂತರ 2012 ರ ಮಾರ್ಚ್ ತಿಂಗಳಿನಲ್ಲಿ ಭಾರತೀಯ ಪೊಲೀಸರು ಜಯಪಾಲ್ ಅವರನ್ನು ಮತ್ತೆ ಬಂಧನಕ್ಕೊಳಪಡಿಸಿದ್ದರು.

ಪ್ರಕರಣ ಸಂಬಂಧ ಇಂದು ಅಮೆರಿಕ ನ್ಯಾಯಾಲಯು ಮತ್ತೆ ವಿಚಾರಣೆ ನಡೆಸಿದ್ದು, ವಿಚಾರಣೆ ವೇಳೆ ಭಾರತೀಯ ಮೂಲದ ಪಾದ್ರಿ ಜಯಪಾಲ್ ತಪ್ಪೊಪ್ಪಿಕೊಂಡಿದ್ದು, ಶಿಕ್ಷೆಯ ಪ್ರಮಾಣವನ್ನು ಜೂನ್ 15ಕ್ಕೆ ಪ್ರಕಟಿಸುವುದಾಗಿ ನ್ಯಾಯಾಲಯವು ಹೇಳಿದೆ. ದೌರ್ಜನ್ಯಕ್ಕೊಳಗಾದ ಯುವತಿ 2005 ರಲ್ಲಿ ಪಾದ್ರಿ ಜಯಪಾಲ್ ಸಾಕಷ್ಟು ಬಾರಿ ಲೈಂಗಿಕ ಕಿರುಕುಳ ನೀಡುತ್ತಿದ್ದನು ಎಂಬ ದೂರೊಂದನ್ನು ದಾಖಲಿಸಿದ್ದಳು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT