ನರೇಂದ್ರ ಮೋದಿ 
ದೇಶ

ಇದೊಂದು ಮತಿಹೀನ ದಾಳಿ: ಮಣಿಪುರ ದಾಳಿ ಬಗ್ಗೆ ಪ್ರಧಾನಿ ಮೋದಿ ಖಂಡನೆ

ಮಣಿಪುರದಲ್ಲಿ ಯೋಧರ ಮೇಲೆ ಭಯೋತ್ಪಾದಕರು ದಾಳಿ ನಡೆಸಿ 20 ಸೈನಿಕರು ಸಾವನ್ನಪ್ಪಿದ ಘಟನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ನವದೆಹಲಿ: ಮಣಿಪುರದಲ್ಲಿ ಯೋಧರ ಮೇಲೆ ಭಯೋತ್ಪಾದಕರು ದಾಳಿ ನಡೆಸಿ 20 ಸೈನಿಕರು ಸಾವನ್ನಪ್ಪಿದ ಘಟನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಇದೊಂದು ಮತಿಹೀನ ದಾಳಿ ಎಂದು ಅವರು ಅಸಹನೆ ವ್ಯಕ್ತಪಡಿಸಿದ್ದಾರೆ. ಮೃತ ಯೋಧರಿಗೆ ಸಂತಾಪ ಸೂಚಿಸಿದ ಅವರು, ಇದೊಂದು ಯಾತನಾಮಯ ವಿಷಯ ಎಂದು ವಿಷಾಧ ವ್ಯಕ್ತ ಪಡಿಸಿದ್ದಾರೆ.

ಇಂದು ಬೆಳಗ್ಗೆ ಸುಮಾರು 8.45 ರ ಸುಮಾರಿನಲ್ಲಿ 6 ಡೋಗ್ರಾ ರೆಜಿಮೆಂಟ್ ಇಂಪಾಲ ದಿಂದ ಸುಮಾರು 80 ಕಿಮೀ ದೂರದಲ್ಲಿರುವ ತೆಂಗಾನುಪಲ್ ಎಂಬ ರಸ್ತೆಯಲ್ಲಿ ಗಸ್ತು ತಿರುತ್ತಿತ್ತು. ಈ ವೇಳೆ ಅಡಗಿ ಕುಳಿತಿದ್ದ ಉಗ್ರರು ಸೈನಿಕರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದರು. ಇದರಿಂದ 20 ಸೈನಿಕರು ಸಾವನ್ನಪ್ಪಿ, ಹಲವು ಮಂದಿ ಗಾಯಗೊಂಡಿದ್ದರು.

ಕಳೆದ 16 ವರ್ಷಗಳ ಅವಧಿಯಲ್ಲಿ ಮಣಿಪುರದಲ್ಲಿ ನಡೆದ ಅತ್ಯಂತ ಘೋರ ದಾಳಿ ಇದು ಎನ್ನಲಾಗಿದೆ. ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಘಟನೆ ಬಗ್ಗೆ ತೀವ್ರವಾಗಿ ಖಂಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?