ದೇಶ

ಆರ್‌ಜೆಡಿ, ಜೆಡಿಯು, ಕಾಂಗ್ರೆಸ್ ಒಂದಾಗಿ ಚುನಾವಣೆ ಎದುರಿಸಲಿವೆ: ಶರದ್ ಯಾದವ್

Lingaraj Badiger

ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಆರ್‌ಜೆಡಿ, ಜೆಡಿಯು ಹಾಗೂ ಕಾಂಗ್ರೆಸ್ ಒಂದಾಗಿ ಬಿಜೆಪಿ ವಿರುದ್ಧ ಸ್ಪರ್ಧಿಸಲಿವೆ ಎಂದು ಜೆಡಿಯು ಅಧ್ಯಕ್ಷ ಶರದ್ ಯಾದವ್ ಅವರು ಗುರುವಾರ ಹೇಳಿದ್ದಾರೆ.

ಕಾಂಗ್ರೆಸ್, ಜೆಡಿಯು, ಆರ್‌ಜೆಡಿ ಹಾಗೂ ಎನ್‌ಸಿಪಿ ಸೇರಿದಂತೆ ಇತರೆ ಪಕ್ಷಗಳು ಒಂದಾಗಿ ಚುನಾವಣೆಗೆ ಸ್ಪರ್ಧಿಸಲಿವೆ' ಎಂದು ಯಾದವ್ ಅವರು ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಈ ಮೂಲಕ ಜೆಡಿಯು ಹಾಗೂ ಆರ್‌ಜೆಡಿ ಏಕಾಂಗಿಯಾಗಿ ಚುನಾವಣೆಗೆ ಸ್ಪರ್ಧಿಸಲಿವೆ ಎಂಬ ವರದಿಗಳಿಗೆ ತೆರೆ ಎಳೆದಿದ್ದಾರೆ.

ಜನತಾ ಪರಿವಾರ ಒಂದಾಗಿವೆ ಎಂದು ಈಗಾಗಲೇ ಘೋಷಿಸಲಾಗಿದೆ ಮತ್ತು ಈ ಒಗ್ಗಟ್ಟಿನ ಬಗ್ಗೆ ನನಗೆ ವಿಶ್ವಾಸವಿದೆ ಎಂದು ಜೆಡಿಯು ಅಧ್ಯಕ್ಷರು ತಿಳಿಸಿದ್ದಾರೆ.

ಈ ಮಧ್ಯೆ ಜನತಾ ಪರಿವಾರದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಮುಂದುವರಿದರೆ ಯಾವುದೇ ಅಭ್ಯಂತರವಿಲ್ಲ ಎಂದು ಲಾಲು ಪ್ರಸಾದ್ ಯಾದವ್ ನೇತೃತ್ವದ ಆರ್‌ಜೆಡಿ ಸ್ಪಷ್ಟಪಡಿಸಿದೆ.

ನಿತೀಶ್‌ ಕುಮಾರ್‌ ಜನತಾ ಪರಿವಾರದ ಮುಖ್ಯಮಂತ್ರಿಯಾದರೆ ನಮ್ಮ ಅಭ್ಯಂತರವಿಲ್ಲ ಎಂದು ಆರ್‌ಜೆಡಿಯ ರಾಜ್ಯಾಧ್ಯಕ್ಷ ನರೇನ್‌ ಸಿಂಗ್‌ ತಿಳಿಸಿದ್ದಾರೆ.

SCROLL FOR NEXT