ವಿಶ್ವ ಪರಿಸರ ದಿನಾಚರಣೆ: ಭೂಮಿ ರಕ್ಷಿಸಲು ಪ್ರಧಾನಿ ಕರೆ
ಹೆಚ್ಚೆಚ್ಚು ಗಿಡಗಳನ್ನು ನೆಟ್ಟು ಭೂಮಿ ತಾಯಿಯನ್ನು ರಕ್ಷಿಸಬೇಕೆಂದು ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ನವದೆಹಲಿ: ಹೆಚ್ಚೆಚ್ಚು ಗಿಡಗಳನ್ನು ನೆಟ್ಟು ಭೂಮಿ ತಾಯಿಯನ್ನು ರಕ್ಷಿಸಬೇಕೆಂದು ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಇಂದು ನವದೆಹಲಿಯ ರೇಸ್ ಕೋರ್ಸ್ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಗಿಡವನ್ನು ನೆಟ್ಟು ಮಾತನಾಡಿದ ಅವರು, ಮುಂದಿನ ಪೀಳಿಗೆಗೆ ಪರಿಸರ ಉಳಿಸುವ ನಿಟ್ಟಿನಲ್ಲಿ ನಾಗರಿಕರು ಕೆಲಸ ಮಾಡಬೇಕೆಂದು ಮೋದಿ ಸಲಹೆ ನೀಡಿದರು.
ಜನ ಹೆಚ್ಚು ಮರಗಳನ್ನು ನೆಡುವಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು. ಇದರಿಂದ ನಮ್ಮ ಮುಂದಿನ ಪೀಳಿಗೆಗೆ ನಾವು ಪರಿಸರ ಸಂರಕ್ಷಿಸಿ ಅವರಿಗೆಅನುಕೂಲ ಮಾಡಿಕೊಡುತ್ತೇವೆ ಎಂದು ಹೆಮ್ಮೆ ಪಡಬೇಕು ಎಂದರು. ಮುಂದಿನ ದಿನಗಳಲ್ಲಿ ಎದುರಾಗುವ ತೊಂದರೆಯಿಂದ ಭೂಮಿ ತಾಯಿಯನ್ನು ರಕ್ಷಿಸಲು ಪರಿಸರದ ಜೊತೆ ಸಾಮರಸ್ಯದಿಂದ ಬದುಕುವುದು ಇರುವ ಒಂದೇ ದಾರಿ ಎಂದು ಹೇಳಿದರು.
ನಮ್ಮ ಪೂರ್ವಿಕರು ಪರಿಸರ ಸಂರಕ್ಷಣೆ ಮಾಡಿ ನಮೆಗ ಕೊಡುಗೆ ನೀಡಿದ್ದಾರ. ನಾವು ಅದೇ ದಾರಿಯಲ್ಲಿ ಮುಂದುವರಿದು ನಮ್ಮ ಮುಂದಿನ ಪೀಳಿಗೆಗೆ ಪರಿಸರ ರಕ್ಷಿಸಬೇಕೆಂದು ಕರೆ ನೀಡಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.