ನಿತೀಶ್ ಕುಮಾರ್ 
ದೇಶ

ರಾಹುಲ್ ಗಾಂಧಿ ಭೇಟಿ ಮಾಡಿದ ಸಿಎಂ ನಿತೀಶ್ ಕುಮಾರ್

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ...

ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ವರ್ಷದ ಅಂತ್ಯಕ್ಕೆ ಬಿಹಾರ ವಿಧಾನಸಭೆ ಚುನಾವಣೆಗಳು ನಡೆಯಲಿದ್ದು,  ಈ ಸಂಬಂಧ ನವದೆಹಲಿಯಲ್ಲಿರುವ ರಾಹುಲ್ ಗಾಂಧಿ ನಿವಾಸಕ್ಕೆ ಭೇಟಿ ನೀಡಿದ ನಿತೀಶ್ ಕುಮಾರ್ ಉಭಯ ಪಕ್ಷಗಳ ಮೈತ್ರಿ ಕುರಿತಂತೆ ಮಾತುಕತೆ ನಡೆಸುವ ಸಾಧ್ಯತೆ ಇದೆ.

ಜನತ ಪರಿವಾರ ಒಕ್ಕೂಟದ ಮುಖ್ಯಸ್ಥರಾಗಿರುವ ನಿತೀಶ್ ಕುಮಾರ್ ಅವರು ಮೈತ್ರಿ ಕುರಿತಂತೆ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ) ಅಧ್ಯಕ್ಷ ಲಾಲೂ ಪ್ರಸಾದ್ ಯಾದವ್ ಹೇಳಿದ್ದರು.

ಬಿಹಾರ ವಿಧಾನಸಭೆ ಚುನಾವಣೆಗಳು ಹತ್ತಿರವಾಗುತ್ತಿದ್ದಂತೆ ರಾಜಕೀಯ ಚುಟುವಟಿಕೆಗಳಲ್ಲಿ ಬಿರುಸು ಪಡೆದುಕೊಂಡಿದೆ. ಬಿಹಾರ ಮಾಜಿ ಮುಖ್ಯಮಂತ್ರಿ ಜೀತನ್ ರಾಮ್ ಮಾಂಝಿ ಅವರು ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ನಿತೀಶ್ ಕುಮಾರ್ ಕಾಂಗ್ರೆಸ್ ವರಿಷ್ಠರನ್ನು ಇಂದು ಭೇಟಿ ಮಾಡಿ ಮಾತುಕತೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ