ಬಿಜೆಪಿ ಅವಧಿಯಲ್ಲೇ ರಾಮಮಂದಿರ ನಿರ್ಮಾಣ: ಸಾಕ್ಷಿ ಮಹಾರಾಜ್
ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಲ್ಲಿರುವ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಅವರು ಭಾನುವಾರ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ನವದಹೆಲಿ: ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಲ್ಲಿರುವ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಅವರು ಭಾನುವಾರ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬಿಜೆಪಿ ಸರ್ಕಾರದ ಅವಧಿಯಲ್ಲೇ ಅಯೊಧ್ಯಯಲ್ಲಿ ರಾಮ ಮಂದಿರ ನಿರ್ಮಾಣವಾಗಲಿದೆ ಎಂದು ಸಾಕ್ಷಿ ಮಹಾರಾಜ್ ಹೇಳಿದ್ದಾರೆ.
ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಉನ್ನಾವೊ ಸಂಸದ, ಬಿಜೆಪಿಯ ಉದ್ದೇಶ ಸ್ಪಷ್ಟವಾಗಿದ್ದು, ನಮ್ಮ ಸರ್ಕಾರದ ಅವಧಿಯಲ್ಲೇ ರಾಮ ಮಂದಿರ ನಿರ್ಮಾಣವಾಗಲಿದೆ ಎಂದು ತಿಳಿಸಿದ್ದಾರೆ.
'ಇಂದಲ್ಲ ನಾಳೆ ಮಂದಿರ ನಿರ್ಮಾಣವಾಗೇ ಆಗುತ್ತೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಈಗ ಒಂದು ವರ್ಷ ಆಗಿದೆ ಅಷ್ಟೇ. ನಮಗೆ ಇನ್ನೂ ನಾಲ್ಕು ವರ್ಷ ಕಾಲಾವಕಾಶ ಇದೆ' ಬಿಜೆಪಿ ಸಂಸದ ಹೇಳಿದ್ದಾರೆ.
ರಾಮಮಂದಿರ ನಿರ್ಮಾಣ ಮಾಡುವುದು ಬಿಜೆಪಿಗೆ ಸಮಸ್ಯೆ ಅಲ್ಲವೇ ಅಲ್ಲ. ಆದರೆ ಸಂತರಾದ ನಮಗೆ ಇದು ದೊಡ್ಡ ಸಮಸ್ಯೆ ಎದು ಇತ್ತೀಚಿಗೆ ಸಾಕ್ಷಿ ಮಹಾರಾಜ್ ಹೇಳಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.