ವಾರಣಾಸಿ ತ್ಯಾಜ್ಯ ಘಟಕದಲ್ಲಿ ಸ್ಪೋಟ (ಸಾಂದರ್ಭಿಕ ಚಿತ್ರ) 
ದೇಶ

ವಾರಣಾಸಿ ತ್ಯಾಜ್ಯ ಘಟಕದಲ್ಲಿ ಸ್ಪೋಟ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಲೋಕಸಭಾ ಕ್ಷೇತ್ರ ವಾರಣಾಸಿಯ ಇರಿಗೇಷನ್ ಕಾಲೋನಿಯಲ್ಲಿ ಸ್ಪೋಟವೊಂದು ಸಂಭವಿಸಿರುವುದಾಗಿ ಸೋಮವಾರ ತಿಳಿದುಬಂದಿದೆ....

ಲಖನೌ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಲೋಕಸಭಾ ಕ್ಷೇತ್ರ ವಾರಣಾಸಿಯ ಇರಿಗೇಷನ್ ಕಾಲೋನಿಯಲ್ಲಿ ಸ್ಪೋಟವೊಂದು ಸಂಭವಿಸಿರುವುದಾಗಿ ಸೋಮವಾರ ತಿಳಿದುಬಂದಿದೆ.

ವಾರಣಾಸಿಯಲ್ಲಿರುವ ಇರಿಗೇಷನ್ ಕಾಲೋನಿಯ ತ್ಯಾಜ್ಯ ಘಟಕದಲ್ಲಿ ಇಂದು ಬೆಳಿಗ್ಗೆ ಸ್ಫೋಟವೊಂದು ಸಂಭವಿಸಿದ್ದು, ಘಟನೆಯಲ್ಲಿ ಸಾವು, ನೋವು ಸಂಭವಿಸಿರುವುದಾಗಿ ವರದಿಯಾಗಿಲ್ಲ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳದವರು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.

ಸ್ಪೋಟದಿಂದ ಗಾಬರಿಯಾಗುವ ಅಗತ್ಯವಿಲ್ಲ. ಸ್ಪೋಟಕ್ಕೆ ಕಾರಣವೇನು ಎಂಬುದು ತಿಳಿದುಬಂದಿಲ್ಲ. ತನಿಖೆ ಮುಂದುವರೆಯುತ್ತಿದ್ದು, ತನಿಖೆಯ ನಂತರವಷ್ಟೇ ಪ್ರಮುಖ ಕಾರಣ ತಿಳಿದು ಬರಲಿದೆ ಎಂದು ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ಹೇಳಿದ್ದಾರೆ.

ತ್ಯಾಜ್ಯ ಘಟಕದಲ್ಲಿ ರಾಸಾಯನಿಕ ಪದಾರ್ಥ ಅಥವಾ ಕಸದ ಕೆಳಗೆ ಇತರೆ ತಾಪದ ವಸ್ತುಗಳಿರುವುದರಿಂದ ಸ್ಫೋಟ ಸಂಭವವಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ SIR: ವಿದೇಶಾಂಗ ಸಚಿವ ಜೈಶಂಕರ್, ಎಲ್.ಕೆ ಅಡ್ವಾಣಿ ಸೇರಿದಂತೆ ಹಲವು ಮತದಾರರಿಗೆ ನೋಟಿಸ್; CEO ಕೊಟ್ಟ ಸ್ಪಷ್ಟನೆ ಏನು?

ಇದು ಎಂತಹ ವಿಶೇಷ ತೀವ್ರ ಪರಿಷ್ಕರಣೆ? ಅರ್ಹರನ್ನು ಕಿತ್ತುಹಾಕಿ, ಅನರ್ಹರನ್ನು ಸೇರಿಸುವುದೇ SIR: ಕಪಿಲ್ ಸಿಬಲ್ ಕಿಡಿ!

ಟಾಟಾ ಸನ್ಸ್ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಮರುನೇಮಕ ಪ್ರಶ್ನಿಸಿದ ಟಾಟಾ ಟ್ರಸ್ಟ್ಸ್!

ಸಿಎಂ ಡಿಕೆ ಶಿವಕುಮಾರ್‌ ನೂರು ದಿನಗಳ ಆಡಳಿತಕ್ಕೆ ಬಿಜೆಪಿ ನಾಯಕ ಫಿದಾ! ಏನಂದ್ರು ಗೊತ್ತಾ?

ಅಂತಹ ಮನಸ್ಥಿತಿ ಇದ್ದಾಗ ಮೊದಲೇ ಅದರಿಂದ ದೂರ ಇರಬೇಕಿತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಹದೇವಪ್ಪ ಟಾಂಗ್!