ನವದೆಹಲಿ: ದೆಹಲಿಯ ಕರ್ಕರ್ ಡೂಮ ಪ್ರದೇಶದ ವಾಣಿಜ್ಯ ಕಟ್ಟಡವೊಂದರಲ್ಲಿ ಸೋಮವಾರ ಇದ್ದಕ್ಕಿದ್ದಂತೆ ಬೆಂಕಿ ಕಾಣಿಕೊಂಡಿರುವುದಾಗಿ ತಿಳಿದುಬಂದಿದೆ.
ಇಂದು ಬೆಳಿಗ್ಗೆ 9.45ರ ಸುಮಾರಿಗೆ ಕರ್ಕರ್ ಡೂಮ ಪ್ರದೇಶದ ವಾಣಿಜ್ಯ ಕಟ್ಟಡದ 6 ಅಂತಸ್ತಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿರುವುದಾಗಿ ತಿಳಿಬಂದಿದ್ದು, ಘಟನೆಗೆ ಪ್ರಮುಖ ಕಾರಣ ಈವರೆಗೂ ತಿಳಿದುಬಂದಿಲ್ಲ.
ಸುದ್ದಿ ತಿಳಿಯುತ್ತಿದ್ದಂತೆ 5 ಅಗ್ನಿ ಶಾಮಕ ದಳದ ವಾಹನಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಕಾರ್ಯಾಚರಣೆ ಆರಂಭಿಸಲಾಯಿತು. ನಂತರ ಮತ್ತೆ 10 ವಾಹನಗಳನ್ನು ಕರೆಸಿಕೊಳ್ಳಲಾಯಿತು. ಘಟನೆಯಲ್ಲಿ ಯಾವುದೇ ಸಾವು, ನೋವುಗಳಾಗಿರುವಂತೆ ತಿಳಿದುಬಂದಿಲ್ಲ. ಕಾರ್ಯಾಚರಣೆಯನ್ನು ಮುಂದುವರೆಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಈಗಾಗಲೇ ಫೊರೆನ್ಸಿಕ್ ತಜ್ಞರು ಭೇಟಿ ನೀಡಿದ್ದು, ಸ್ಥಳದಿಂದ ಕೆಲವು ಮಾದರಿ ವಸ್ತುಗಳನ್ನು ಪಡೆದು ಪರೀಕ್ಷೆ ನಡೆಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ
ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ. .