ಹಿರಿಯ ಐಪಿಎಸ್ ಅಧಿಕಾರಿ ಆರ್ ಸಿ ತಾಯಲ್ 
ದೇಶ

ಎನ್ ಎಸ್ ಜಿ ಮುಖ್ಯಸ್ಥರಾಗಿ ಆರ್ ಸಿ ತಾಯಲ್ ನೇಮಕ

ರಾಷ್ಟ್ರೀಯ ಭದ್ರತಾ ಪಡೆ (ಎನ್ ಎಸ್ ಜಿ)ಯ ನೂತನ ಮುಖ್ಯಸ್ಥರಾಗಿ ಹಿರಿಯ ಐಪಿಎಸ್ ಅಧಿಕಾರಿ ಆರ್ ಸಿ ತಾಯಲ್ ಅವರು ಸೋಮವಾರ ನೇಮಕಗೊಂಡಿದ್ದಾರೆ.

ನವದೆಹಲಿ: ರಾಷ್ಟ್ರೀಯ ಭದ್ರತಾ ಪಡೆ (ಎನ್ ಎಸ್ ಜಿ)ಯ ನೂತನ ಮುಖ್ಯಸ್ಥರಾಗಿ ಹಿರಿಯ ಐಪಿಎಸ್ ಅಧಿಕಾರಿ ಆರ್ ಸಿ ತಾಯಲ್ ಅವರು ಸೋಮವಾರ ನೇಮಕಗೊಂಡಿದ್ದಾರೆ.

ಸೋಮವಾರ ಬೆಳಗ್ಗೆ ಕೇಂದ್ರ ಗೃಹ ಇಲಾಖೆಯು ಹೊರಡಿಸಿರುವ ಅಧಿಕೃತ ಆದೇಶದಲ್ಲಿ ಎನ್ ಎಸ್ ಜಿ ಮುಖ್ಯಸ್ಥ ಹುದ್ದೆಗೆ ಆರ್ ಸಿ ತಾಯಲ್ ಅವರ ಹೆಸರನ್ನು ಆಯ್ಕೆ ಮಾಡಲಾಗಿದೆ. 1980ರ ಬ್ಯಾಚ್ ನ ಮೇಘಾಲಾಯ ಕೇಡರ್ ನ ಐಪಿಎಸ್ ಅಧಿಕಾರಿ ತಾಯಲ್ ಅವರು, ಪ್ರಸ್ತುತ ಜಮ್ಮು ಕಾಶ್ಮೀರದಲ್ಲಿರುವ ಪ್ಯಾರಾಮಿಲಿಟರಿ ಸಿಆರ್ ಪಿಎಫ್ ಪಡೆಗಳ ವಿಶೇಷ ಡಿಜಿ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೀಗ ಕೇಂದ್ರ ಗೃಹ ಇಲಾಖೆ ಅವರನ್ನು ಎನ್ ಎಸ್ ಜಿ ಮುಖ್ಯಸ್ಥರನ್ನಾಗಿ ನೇಮಿಸಿದ್ದು, ಮುಂಬರುವ  2016 ಆಗಸ್ಟ್ ತಿಂಗಳವರೆಗೂ ಅವರು ತಮ್ಮ ಅಧಿಕಾರದಲ್ಲಿ ಮುಂದುವರೆಯಲಿದ್ದಾರೆ.

ಹರ್ಯಾಣ ಮೂಲದ ತಾಯಲ್ ಅವರು, ಸಹಸ್ರ ಸೀಮಾ ದಳ ಮುಖ್ಯಸ್ಥರಾಗಿಯೂ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಮುಂದಿನವಾರ ಎನ್ ಎಸ್ ಜಿ ಮುಖ್ಯಸ್ಥರಾಗಿ ತಾಯಲ್ ಅವರು ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈ ಹಿಂದಿನ ಮುಖ್ಯಸ್ಥರಾಗಿದ್ದ ಜೆಎನ್ ಚೌದರಿ ಅವರು ಕಳೆದ ಮೇ 31ರಂದು ನಿವೃತ್ತರಾಗಿದ್ದರು. ಬಳಿಕ ಈ ಸ್ಥಾನ ಖಾಲಿ ಉಳಿದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

SCROLL FOR NEXT