ದೇಶ

'ಮಹಾ'ನಾಯಕರ ಸ್ಮಾರಕ ನಿರ್ಮಾಣಕ್ಕೆ ಭೂಮಿ: ಶಿವಸೇನೆ ಎಐಎಂಐಎಂ ನಡುವೆ ವಾಗ್ಯುದ್ಧ

ಗಣ್ಯ ವ್ಯಕ್ತಿಗಳ ಸ್ಮಾರಕ ನಿರ್ಮಾಣಕ್ಕೆ ಭೂಮಿ ನೀಡುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿರುವ ಎ.ಐ.ಎಂ.ಐ.ಎಂ ವಿರುದ್ಧ ಶಿವಸೇನೆ ಆಕ್ರೋಶ ವ್ಯಕ್ತಪಡಿಸಿದೆ.

ಮುಂಬೈ: ಮಹಾರಾಷ್ಟ್ರ ಗಣ್ಯ ವ್ಯಕ್ತಿಗಳ ಸ್ಮಾರಕ ನಿರ್ಮಾಣಕ್ಕೆ ಭೂಮಿ ನೀಡುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿರುವ ಎ.ಐ.ಎಂ.ಐ.ಎಂ ವಿರುದ್ಧ ಶಿವಸೇನೆ ಆಕ್ರೋಶ ವ್ಯಕ್ತಪಡಿಸಿದೆ.

ಎ.ಐ.ಎಂ.ಐ.ಎಂ ವಿರುದ್ಧ ವಾಗ್ದಾಳಿ ನಡೆಸಿರುವ ಶಿವಸೇನೆ,  ಮಹಾರಾಷ್ಟ್ರ ಮುಖಂಡರ ಸ್ಮಾರಕಗಳಿಗೆ ಭೂಮಿ ನೀಡುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿರುವ ಎ.ಐ.ಎಂ.ಐ.ಎಂ ರಾಜ್ಯ ದ್ರೋಹವೆಸಗುತ್ತಿದೆ ಎಂದು ಆರೋಪಿಸಿದೆ.

ಛತ್ರಪತಿ ಶಿವಾಜಿ, ಶಿವಸೇನೆಯ ಮುಖಂಡ ದಿ. ಬಾಳಾ ಸಾಹೇಬ್ ಠಾಕ್ರೆ ಹಾಗೂ ಬಿಜೆಪಿ ಮುಖಂಡ ದಿ.ಗೋಪಿನಾಥ್ ಮುಂಡೆ  ಅವರ ಸ್ಮಾರಕ ನಿರ್ಮಾಣಕ್ಕಾಗಿ ಭೂಮಿ ನೀಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. ಸ್ಮಾರಕ ನಿರ್ಮಾಣಕ್ಕೆ ಭೂಮಿ ನೀಡುವುದು ಸಾರ್ವಜನಿಕರ ಹಣವನ್ನು ಪೋಲು ಮಾಡಿದಂತೆ ಎಂದು ಟೀಕಿಸಿದ್ದ ಎ.ಐ.ಎಂ.ಐ.ಎಂ ಈ ನಿರ್ಧಾರವನ್ನು ವಿರೋಧಿಸಿತ್ತು. ಅಲ್ಲದೇ ಸ್ಮಾರಕ ನಿರ್ಮಾಣ ಮಾಡುವ ಬದಲು, ಆಸ್ಪತ್ರೆ ಹಾಗೂ ಸಾರ್ವಜನಿಕರಿಗೆ ಉಪಯುಕ್ತವಾಗುವಂತಹ ಕಟ್ಟಗಳ ನಿರ್ಮಾಣಕ್ಕೆ ಭೂಮಿ ನೀಡಬೇಕೆಂದು ಎ.ಐ.ಎಂ.ಐ.ಎಂ ಸಲಹೆ ನೀಡಿತ್ತು.
ಎ.ಐ.ಎಂ.ಐ.ಎಂ ಆಕ್ಷೇಪಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಶಿವಸೇನೆ, ಹಜ್ ಯಾತ್ರೆಗೆ ಸಬ್ಸಿಡಿ ನೀಡುವುದು ಸಾರ್ವಜನಿಕರ ಹಣವನ್ನು ಪೋಲುಮಾಡಿದಂತಾಗುವುದಿಲ್ಲವೇ? ಎಂದು ಪ್ರಶ್ನಿಸಿದೆ. ಹಜ್ ಯಾತ್ರೆಗೆ  ನೀಡುವ ಸಬ್ಸಿಡಿ ಹಣದಲ್ಲಿ ಆಸ್ಪತ್ರೆಗಳನ್ನು ನಿರ್ಮಿಸಬಹುದು ಎಂದು ಶಿವಸೇನೆ ಅಭಿಪ್ರಾಯಪಟ್ಟಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT