ಗುಂಡಿನ ಮಳೆಗೆರೆದ ಮಾನಸಿಕ ರೋಗಿ: 5 ಸಾವು, ಇಬ್ಬರಿಗೆ ಪೊಲೀಸರಿಗೆ ಗಾಯ (ಸಾಂದರ್ಭಿಕ ಚಿತ್ರ) 
ದೇಶ

ಗುಂಡಿನ ಮಳೆಗೆರೆದ ಮಾನಸಿಕ ರೋಗಿ: 5 ಸಾವು, ಇಬ್ಬರು ಪೊಲೀಸರಿಗೆ ಗಾಯ

ಮಾನಸಿಕ ರೋಗದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಕೈಗೆ ಸಿಕ್ಕ ಪಿಸ್ತೂಲಿನಿಂದ ಸ್ಥಳೀಯರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಪರಿಣಾಮ 5 ಸಾವನ್ನಪ್ಪಿದ್ದು, ಇಬ್ಬರಿಗೆ ಪೊಲೀಸರು ಗಂಭೀರ ಗಾಯವಾಗಿರುವ ಘಟನೆ ಉತ್ತರ ಚೀನಾದ ಗ್ರಾಮಾಂತರ ಭಾಗದಲ್ಲಿ ಮಂಗಳವಾರ ನಡೆದಿದೆ...

ಬೀಜಿಂಗ್: ಮಾನಸಿಕ ರೋಗದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಕೈಗೆ ಸಿಕ್ಕ ಪಿಸ್ತೂಲಿನಿಂದ ಸ್ಥಳೀಯರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಪರಿಣಾಮ 5 ಸಾವನ್ನಪ್ಪಿದ್ದು, ಇಬ್ಬರಿಗೆ ಪೊಲೀಸರು ಗಂಭೀರ ಗಾಯವಾಗಿರುವ ಘಟನೆ ಉತ್ತರ ಚೀನಾದ ಗ್ರಾಮಾಂತರ ಭಾಗದಲ್ಲಿ ಮಂಗಳವಾರ ನಡೆದಿದೆ.

40 ವರ್ಷದ ಲಿಯು ಶಾಂಗ್ರುಯ್ ಎಂಬ ವ್ಯಕ್ತಿ ಪ್ಯಾರನಾಯ್ಡ್ ಸ್ಕಿಜೋಫ್ರೇನಿಯಾ (ಸಂಶಯಾಸ್ಪದ ರೋಗ) ಎಂಬ ರೋಗದಿಂದ ಬಳಲುತ್ತಿದ್ದು, ಇತರರು ತಮ್ಮ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂಬ ಅನುಮಾನದಿಂದ ತಮ್ಮ ಕೈಗೆ ಸಿಕ್ಕ ಪಿಸ್ತೂಲ್ ತೆಗೆದುಕೊಂಡು ಸ್ಥಳೀಯರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದರಂತೆ ಸ್ಥಳದಲ್ಲಿದ್ದ ಇಬ್ಬರು ಸ್ಥಳೀಯರು ಸಾವನ್ನಪ್ಪಿದ್ದಾರೆ.

ನಂತರ ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ಮಾನಸಿಕ ರೋಗಿಯನ್ನು ತಡೆಯಲು ಯತ್ನಿಸಿದ್ದಾರೆ. ಆದರೆ, ಪೊಲೀಸರ ಮೇಲೂ ಗುಂಡಿನ ದಾಳಿ ಮಾಡಿದ ರೋಗಿ, ಕೌಂಟಿ ಪೊಲೀಸ್ ಇಲಾಖೆಯ ರಾಜತಾಂತ್ರಿಕ ಮುಖ್ಯಾಧಿಕಾರಿ ಸೇರಿ ಮತ್ತಿಬ್ಬರು ಪೊಲೀಸ್ ಸಿಬ್ಬಂದಿಗಳನ್ನು ಹತ್ಯೆ ಮಾಡಿದ್ದಾನೆಂದು ಹೇಳಲಾಗುತ್ತಿದೆ.

ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸುತ್ತಿದ್ದಾನೆಂದು ದೂರವಾಣಿ ಕರೆಬಂದಿತು. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆಯಲು ಆರೋಪಿಯನ್ನು ಸುತ್ತವರೆದರು. ತದನಂತರವೂ ವ್ಯಕ್ತಿ ತನ್ನ ಕೈಯಲ್ಲಿದ್ದ ಪಿಸ್ತೂಲಿನಿಂದ ಗುಂಡು ಹಾರಿಸಿದ. ಇದರಿಂದಾಗಿ ಸ್ಥಳದಲ್ಲಿದ್ದ ರಾಜತಾಂತ್ರಿಕ ಮುಖ್ಯಾಧಿಕಾರಿ ಹಾಗೂ ಇಬ್ಬರು ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಸಾವನ್ನಪ್ಪಿದರು ಮತ್ತು ಇಬ್ಬರು ಪೊಲೀಸರು ಗಂಭೀರವಾಗಿ ಗಾಯಗೊಂಡರು. ನಂತರ ಬೇರಾವುದೇ ದಾರಿಯಿಲ್ಲದ ಕಾರಣ ಆರೋಪಿಗೆ ಗುಂಡು ಹಾರಿಸಿ ಹತ್ಯೆಮಾಡಲಾಯಿತು. ಸ್ಥಳಕ್ಕೆ ಭೇಟಿ ನೀಡಿದಾಗ ವ್ಯಕ್ತಿ ಕುರಿತಂತೆ ನಮಗೆ ಯಾವುದೇ ಮಾಹಿತಿ ಇರಲಿಲ್ಲ. ಆತನನ್ನು ತಡೆದು ವಶಕ್ಕೆ ಪಡೆಯುವುದಷ್ಟೇ ನಮ್ಮ ಉದ್ದೇಶವಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!