ಜಿತೇಂದ್ರ ಸಿಂಗ್ ತೋಮರ್ 
ದೇಶ

ಸಚಿವ ಜಿತೇಂದ್ರ ತೋಮರ್ 4 ದಿನ ಪೊಲೀಸ್ ವಶಕ್ಕೆ

ನಕಲಿ ಕಾನೂನು ಪದವಿ ಪ್ರಮಾಣ ಪತ್ರ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ದೆಹಲಿ ಕಾನೂನು ಸಚಿವ ಜಿತೇಂದ್ರ ತೋಮರ್...

ನವದೆಹಲಿ: ನಕಲಿ ಕಾನೂನು ಪದವಿ ಪ್ರಮಾಣ ಪತ್ರ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ದೆಹಲಿ ಕಾನೂನು ಸಚಿವ ಜಿತೇಂದ್ರ ತೋಮರ್ ಅವರನ್ನು ದೆಹಲಿಯ ಸಾಕೇತ್ ಕೋರ್ಟ್ ಪೊಲೀಸ್ ಕಸ್ಟಡಿಗೆ ನೀಡಿದೆ.

ಮಂಗಳವಾರ ಬೆಳಗ್ಗೆ ಜಿತೇಂದ್ರ ತೋಮರನ್ನು ಬಂಧಿಸಿದ್ದ ದೆಹಲಿ ಪೊಲೀಸರು ದೆಹಲಿಯ ಸಾಕೇತ್ ಕೋರ್ಟ್ ಮುಂದೆ ಹಾಜರು ಪಡಿಸಿದರು. ಈ ವೇಳೆ ತೋಮರನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡುವಂತೆ ದೆಹಲಿ ಪೊಲೀಸರು ಮನವಿ ಮಾಡಿದ್ದು, ಪೊಲೀಸರ ಮನವಿಯನ್ನು ಪುರಸ್ಕರಿಸಿದ ಕೋರ್ಟ್ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿದೆ.

ಪ್ರಕರಣ ಸಂಬಂಧ ನಿನ್ನೆ ರಾತ್ರಿ ಜಿತೇಂದ್ರ ತೋಮರ್ ವಿರುದ್ಧ ದೆಹಲಿ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದು, ಇಂದು ಬೆಳಗ್ಗೆ ತೋಮರನ್ನು ಬಂಧಿಸಲಾಗಿತ್ತು.

ತೋಮರ್ ಬಂಧನಕ್ಕೆ ಆಪ್ ನಾಯಕರು ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಯಾವುದೇ ನೋಟಿಸ್  ನೀಡದೇ ಸಚಿವರನ್ನು ಬಂಧಿಸಲಾಗಿದೆ. ಆಪ್ ಸರ್ಕಾರದ ಮೇಲೆ ಒತ್ತಡ ಹೇರಲು ಕೇಂದ್ರ ನಾಯಕರು ಈ ಕುತಂತ್ರ ಅನುಸರಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!