ಯೋಗೇಂದ್ರ ಯಾದವ್ 
ದೇಶ

ತೋಮರ್ ಪದವಿ ಅಸಲಿಯಾಗಿದ್ದರೆ ಬಹಿರಂಗಪಡಿಸಿ: ಯೋಗೇಂದ್ರ ಯಾದವ್

ದೆಹಲಿ ಕಾನೂನು ಸಚಿವ ಜಿತೆಂದ್ರ ಸಿಂಗ್ ತೋಮರ್ ಅವರ ದಿಡೀರ್ ಬಂಧನದ ಬಗ್ಗೆ ಪ್ರತಿಕ್ರಿಯಿಸಿರುವ ಆಮ್ ಆದ್ಮಿ ಪಕ್ಷದ ಮಾಜಿ ನಾಯಕ ಯೋಗೇಂದ್ರ ...

ನವದೆಹಲಿ: ದೆಹಲಿ ಕಾನೂನು ಸಚಿವ ಜಿತೆಂದ್ರ ಸಿಂಗ್ ತೋಮರ್ ಅವರ ದಿಡೀರ್ ಬಂಧನದ ಬಗ್ಗೆ ಪ್ರತಿಕ್ರಿಯಿಸಿರುವ ಆಮ್ ಆದ್ಮಿ ಪಕ್ಷದ ಮಾಜಿ ನಾಯಕ ಯೋಗೇಂದ್ರ ಯಾದವ್ ಅವರು, ತೋಮರ್ ಅವರು ಕಾನೂನು ಪದವಿ ಪಡೆದಿರುವುದೇ ನಿಜವಾಗಿದ್ದರೆ ಆಮ್ ಆದ್ಮಿ ಪಕ್ಷ ಅದನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಲಿ ಎಂದು ಹೇಳಿದ್ದಾರೆ.

ನಕಲಿ ಪದವಿ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಇಂದು ದೆಹಲಿ ಪೊಲೀಸರು ಆಪ್ ಸಚಿವರನ್ನು ಬಂಧಿಸಿರುವ ಬಗ್ಗೆ ಯಾದವ್ ಅವರು ಟ್ವಿಟರ್‌ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಭಾಗಲ್‌ಪುರ ವಿಶ್ವವಿದ್ಯಾಲಯದಿಂದ ತೋಮರ್ ಅವರು ನಕಲಿ ಪದವಿ ಪ್ರಮಾಣ ಪತ್ರ ಪಡೆದಿದ್ದಾರೆ ಎಂದು ಈ ಹಿಂದೆ ಬಿಜೆಪಿ ಆರೋಪಿಸಿತ್ತು. ಆದರೆ ಈ ಆರೋಪವನ್ನು ತಳ್ಳಿಹಾಕಿದ್ದ ತೋಮರ್, ಇದು ರಾಜಕೀಯ ಪಿತೂರಿ ಎಂದಿದ್ದರು.

ತೋಮರ್ ಸಿಂಗ್ ಅವರನ್ನು ಬಂಧಿಸಲಾಗಿದೆ ಎಂದು ಹೇಳಿರುವ ಎಎಪಿ ನಾಯಕ ಸಂಜಯ್ ಸಿಂಗ್ ಅವರು ಸಹ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ದೂರಿದ್ದಾರೆ. ದೆಹಲಿ ಪೊಲೀಸರು ಯಾವುದೇ ನೋಟಿಸ್ ನೀಡದೇ ಆಪ್ ಸಚಿವರನ್ನು ಬಂಧಿಸಲಾಗಿದೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

SCROLL FOR NEXT