ಸೋಮನಾಥ್‌ ಭಾರ್ತಿ 
ದೇಶ

ಸೋಮನಾಥ್‌ ಭಾರ್ತಿ ನನ್ನ ಮತ್ತು ಮಕ್ಕಳ ಮೇಲೆ ಹಲ್ಲೆ ನಡೆಸುತ್ತಾರೆ: ಆಯೋಗಕ್ಕೆ ಪತ್ನಿ ದೂರು

ಆಮ್ ಆದ್ಮಿ ಪಕ್ಷದ ಹಾಲಿ ಶಾಸಕ ಹಾಗೂ ಮಾಜಿ ಸಚಿವ ಸೋಮನಾಥ್‌ ಭಾರ್ತಿ ವಿರುದ್ಧ ಪತ್ನಿ ಹಲ್ಲೆ ಹಾಗೂ ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ದೆಹಲಿಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ...

ನವದೆಹಲಿ: ಆಮ್ ಆದ್ಮಿ ಪಕ್ಷದ ಹಾಲಿ ಶಾಸಕ ಹಾಗೂ ಮಾಜಿ ಸಚಿವ ಸೋಮನಾಥ್‌ ಭಾರ್ತಿ ವಿರುದ್ಧ ಪತ್ನಿ ಹಲ್ಲೆ ಹಾಗೂ ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ದೆಹಲಿಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.

ನನ್ನ ಪತಿ, ಆಪ್‌ ಶಾಸಕ ಸೋಮನಾಥ್‌ ಭಾರ್ತಿ ನನಗೆ ಮಾತ್ರವಲ್ಲದೆ ತನ್ನ ಮಕ್ಕಳ ಮೇಲೆ ನಿರಂತರವಾಗಿ ಹಲ್ಲೆ ನಡೆಸುತ್ತಿದ್ದಾರೆ. ಇದರಿಂದ ನಾವು ರೋಸಿ ಹೋಗಿದ್ದು, ನಾನು ಪತಿಯಿಂದ ಪ್ರತ್ಯೇಕಗೊಂಡು ಮಕ್ಕಳೊಂದಿಗೆ ಸಮಾಜದಲ್ಲಿ ಘನತೆಯಿಂದ ಬಾಳಲು ಬಯಸುತ್ತೇನೆ' ಎಂದು ಲಿಪಿಕಾ ಮಿತ್ರಾ ಅವರು ತಮ್ಮ ದೂರಿನಲ್ಲಿ ಹೇಳಿದ್ದಾರೆ.

ಲಿಪಿಕಾ ಮಿತ್ರಾ ಅವರ ದೂರಿನನ್ವಯ ಸೋಮನಾಥ್ ಭಾರ್ತಿ ವಿರುದ್ಧ ದೆಹಲಿ ಮಹಿಳಾ ಆಯೋಗವು ಕೌಟುಂಬಿಕ ದೌರ್ಜನ್ಯ ಆರೋಪದಡಿ ಪ್ರಕರಣ ದಾಖಲಿಸಿದ್ದು, ಇದೇ 26ರಂದು ಆಯೋಗದ ಮುಂದೆ ಹಾಜರಾಗುವಂತೆ ಸೋಮನಾಥ್‌ ಭಾರ್ತಿ ಅವರಿಗೆ ನೋಟಿಸ್ ನೀಡಲಾಗಿದೆ ಎಂದು ಆಯೋಗದ ಅಧ್ಯಕ್ಷೆ ಬರ್ಖಾ ಸಿಂಗ್‌ ತಿಳಿಸಿದ್ದಾರೆ.


ಆರೋಪ ತಳ್ಳಿ ಹಾಕಿದ: ಭಾರ್ತಿ
ತಮ್ಮ ವಿರುದ್ಧ ಆಧಾರ ರಹಿತ ಆರೋಪ ಮಾಡಲಾಗಿದೆ ಎಂದು ದೆಹಲಿ ಮಾಜಿ ಸಚಿವ ಸೋಮನಾಥ್ ಭಾರ್ತಿ ಅವರು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?