ಮನೋಹರ್ ಪರಿಕ್ಕರ್ 
ದೇಶ

ಬಂಡುಕೋರರ ವಿರುದ್ಧದ ಕಾರ್ಯಾಚರಣೆ ಭಾರತದ ಬದಲಾದ ಮನಸ್ಥಿತಿ ತೋರಿಸುತ್ತೆ: ಪರಿಕ್ಕರ್

ಮಣಿಪುರದಲ್ಲಿ ಸೈನಿಕರ ಮೇಲೆ ನಡೆದ ದಾಳಿಯ ಬೆನ್ನಲ್ಲೇ ಭಾರತೀಯ ಸೇನೆ ಮ್ಯಾನ್ಮಾರ್ ನಲ್ಲಿ ಉಗ್ರರ ವಿರುದ್ಧ ನಡೆಸಿದ ಕಾರ್ಯಾಚರಣೆ....

ನವದೆಹಲಿ:  ಮಣಿಪುರದಲ್ಲಿ ಸೈನಿಕರ ಮೇಲೆ ನಡೆದ ದಾಳಿಯ ಬೆನ್ನಲ್ಲೇ ಭಾರತೀಯ ಸೇನೆ ಮ್ಯಾನ್ಮಾರ್ ನಲ್ಲಿ ಉಗ್ರರ ವಿರುದ್ಧ ನಡೆಸಿದ ಕಾರ್ಯಾಚರಣೆ ಬದಲಾದ ಭಾರತದ ಮನಸ್ಥಿತಿ ಹಾಗೂ ಉಗ್ರರ ವಿರುದ್ಧದ ಸ್ಪಷ್ಟ ನಿಲುವನ್ನು ತೋರಿಸುತ್ತೆ ಎಂದು ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಅವರು, ಭಾರತೀಯ ಸೈನಿಕರು ತಮ್ಮ ಗಡಿಯನ್ನು ಪ್ರವೇಶಿಸಿಲ್ಲ ಎಂದು ಮ್ಯಾನ್ಮಾರ್ ಹೇಳಿಕೊಂಡಿದೆ. ಆದರೆ ಭಾರತೀಯ ಸೇನೆ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರ ಶಿಬಿರಗಳು ನಾಶವಾಗಿರುವುದನ್ನು ಭಾರತ ಘಂಟಾಘೋಷವಾಗಿ ಹೇಳುತ್ತದೆ ಎಂದು ಅವರು ತಿಳಿಸಿದ್ದಾರೆ.

ಭಾರತ-ಮ್ಯಾನ್ಮಾರ್ ಗಡಿಯಲ್ಲಿ ಭಾರತೀಯ ಸೈನಿಕರಿಂದ ಹೇಗೆ ಕಾರ್ಯಾಚರಣೆ ನಡೆಸಬೇಕು ಎಂಬುದನ್ನು ನೋಡಿ ಕಲಿತಿದ್ದೇವೆ ಎಂದು ಮ್ಯಾನ್ಮಾರ್ ಸೇನೆ ಹೇಳಿದೆ. ನೆರೆಯ ರಾಷ್ಟ್ರಗಳು ನಮ್ಮ ಪ್ರದೇಶವನ್ನು ಬಳಸಿಕೊಂಡು ಯಾವುದೇ ಸಮಸ್ಯೆ ಸೃಷ್ಟಿಸಿದರೇ ಅದನ್ನು ನೋಡಿಕೊಂಡು ಸುಮ್ಮನಿರುವುದಿಲ್ಲ ಎಂದು.  ಮ್ಯಾನ್ಮಾರ್ ಅಧ್ಯಕ್ಷರ ಕಚೇರಿ ನಿರ್ದೇಶಕ ಝಾವ್ ಹಿತೇ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಹೇಳಿಕೊಂಡಿದ್ದಾರೆ.

ಕಾರ್ಯಾಚರಣೆ ನಡೆಸಿದ ಭಾರತೀಯ ಸೇನೆ 2 ಭಯೋತ್ಪಾದಕರ ಶಿಬಿರ ನಾಶಪಡಿಸಿರುವುದನ್ನು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಸ್ಪಷ್ಟಪಡಿಸಿದ್ದಾರೆ. ಆದರೆ ಕಾರ್ಯಾಚರಣೆ ಬಗ್ಗೆ ವಿವರಣೆ ನೀಡಲು ಅವರು ನಿರಾಕರಿಸಿದ್ದಾರೆ.

ಈ ನಡುವೆ  ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಚಿವ ಜಿತೇಂದ್ರ ಸಿಂಗ್ ಅವರನ್ನು ಮಣಿಪುರಕ್ಕೆ ಭೇಟಿ ನೀಡಿ ಪರಿಸ್ಥಿತ ಅವಲೋಕಿಸಿ ವರದಿ ನೀಡುವಂತೆ ತಿಳಿಸಿದೆ.

ಒಟ್ಟಿನಲ್ಲಿ ಭಾರತೀಯ ಸೈನಿಕರಿಂದ ಮ್ಯಾನ್ಮಾರ್ ಗಡಿಯಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆ ಹಲವು ಗೊಂದಲ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ