ದೇಶ

ಪ್ರತೀಕಾರ ದಾಳಿಗಾಗಿ ಭಾರತದೊಳಗೆ ನುಗ್ಗಿದ ಉಗ್ರರು: ಹೈ ಅಲರ್ಟ್ ಘೋಷಣೆ

ಭಾರತೀಯ ಸೇನೆ ಮಯನ್ಮಾರ್ ಗಡಿಯೊಳಗೆ ನುಗ್ಗಿ ನಡೆಸಿದ್ದ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಎನ್.ಎಸ್. ಸಿ.ಎನ್-ಕೆ ಉಗ್ರರು ಭಾರತದೊಳಗೆ ಪ್ರವೇಶಿಸಿದ್ದಾರೆ.

ನವದೆಹಲಿ: ಭಾರತೀಯ ಸೇನೆ ಮಯನ್ಮಾರ್ ಗಡಿಯೊಳಗೆ ನುಗ್ಗಿ ನಡೆಸಿದ್ದ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಎನ್.ಎಸ್. ಸಿ.ಎನ್-ಕೆ ಉಗ್ರರು ಭಾರತದೊಳಗೆ ಪ್ರವೇಶಿಸಿದ್ದು ಈಶಾನ್ಯ ಪ್ರದೇಶದಲ್ಲಿ ವಿಧ್ವಂಸಕ ಕೃತ್ಯ ನಡೆಸುವ  ಸಾಧ್ಯತೆ ಇದೆ.   

100 ಉಗ್ರರನ್ನು ಹತ್ಯೆ ಮಾಡಿದ್ದ ಭಾರತೀಯ ಸೇನೆಯ ಕಾರ್ಯಾಚರಣೆಗೆ ಸೇಡು  ತೀರಿಸಿಕೊಳ್ಳಲು ಮಯನ್ಮಾರ್ ನಲ್ಲಿದ್ದ ಉಗ್ರ ಸಂಘಟನೆಗಳು ಸಿದ್ಧತೆ ನಡೆಸಿದ್ದು,  ಉಗ್ರರು ಭಾರತದೊಳಗೆ ಅತಿಕ್ರಮಣ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಭಾರತದ ಈಶಾನ್ಯ ಭಾಗದಲ್ಲಿ ಹೆಚ್ಚಿನ ಭದ್ರತಾ ಎಚ್ಚರಿಕೆ ನೀಡಿದೆ. ಕೇಂದ್ರ ಸರ್ಕಾರದ ಸೂಚನೆಯಂತೆ ಈಶಾನ್ಯ ಭಾಗಗಳಲ್ಲಿ ಹೆಚ್ಚಿನ ಭದ್ರತೆ  ಕೈಗೊಳ್ಳಲಾಗಿದೆ.

ಏಕಾಏಕಿ ದಾಳಿ ನಡೆಸಿ ಭಯೋತ್ಪಾದಕರನ್ನು ಹೊಡೆದುರುಳಿಸಿದ 2  ದಿನಗಳ ಬಳಿಕ ಮತ್ತೊಂದು ಪರಿಣಾಮಕಾರಿ ಕಾರ್ಯಾಚರಣೆ ನಡೆಸಲು ಭಾರತ ಸರ್ಕಾರ ಸಿದ್ಧತೆ ನಡೆಸಿದೆ. ಮಯನ್ಮಾರ್ ನೊಂದಿಗಿನ ಜಂಟಿ ಕಾರ್ಯಾಚರಣೆ ಇದಾಗಿರಲಿದ್ದು, ಈ ಬಗ್ಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್  ಮಯನ್ಮಾರ್ ನ ಅಧಿಕಾರಿಗಳೊಂದಿಗೆ ಮಾತನಾಡಲಿದ್ದಾರೆ. ಭಯೋತ್ಪಾದಕರ 20  ಕ್ಯಾಂಪ್ ಗಳ ಮೇಲೆ ದಾಳಿ ನಡೆಸಲು ಭಾರತ ಸರ್ಕಾರ  ಯೋಜನೆ ರೂಪಿಸಿದೆ. ಅಷ್ಟರೊಳಗೆ  ಭಯೋತ್ಪಾದಕರು ಪ್ರತೀಕಾರ ತೀರಿಸಿಕೊಳ್ಳಲು ಭಾರತದೊಳಗೆ ವಿಧ್ವಸಂಸಕ  ಕೃತ್ಯ  ನಡೆಸುವ ಸಾಧ್ಯತೆ ಇದೆ ಎಂದು  ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡುವುದಿಲ್ಲ; ರಾಹುಲ್ ಗಾಂಧಿ ಗುಡುಗು!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ - SP ನಡುವೆ ಜಟಾಪಟಿ; 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್‌ಡಿ ರೇವಣ್ಣ

ಹೆಲಿಕಾಪ್ಟರ್‌ನಿಂದ ಉಳಿಯುವಾಗ 2 ತಿಂಗಳ ಮಗುವಿನೊಂದಿಗೆ ಎಡವಿದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಪತ್ನಿ ಉಷಾ, Video

ಹೀಗೂ ಉಂಟೆ?: BJP ಶಾಸಕನ ಬಂಗಲೆ ತೊಳೆಯಲು ಹೋದ ಅಗ್ನಿಶಾಮಕ ವಾಹನ; ವಿಡಿಯೋ ವೈರಲ್‌ ಬೆನ್ನಲ್ಲೇ ₹2,700 ದಂಡ!