ಶ್ರೀನಗರ: ಭಾರತ ಮಯನ್ಮಾರ್ ಗಡಿಯಲ್ಲಿ ಸೇನಾ ಕಾರ್ಯಾಚರಣೆ ನಡೆಸುವ ಮೂಲಕ ಪಾಕಿಸ್ತಾನಕ್ಕೆ ಪರೋಕ್ಷ ಎಚ್ಚರಿಕೆ ನೀಡಿದ ಬೆನ್ನಲ್ಲೇ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿ, ಗಡಿ ನಿಯಂತ್ರಣ ರೇಖೆ ಬಳಿ ಅಪ್ರಚೋದಿತ ದಾಳಿ ನಡಿಸಿದೆ.
ಜಮ್ಮುವಿನ ಪೂಂಚ್ ಜಿಲ್ಲೆಯ ಸೌಜ್ಜನ್ ಸೆಕ್ಟರ್ ನ ಗಡಿನಿಯಂತ್ರಣ ರೇಖೆ ದೇಶದಲ್ಲಿ ಪಾಕಿಸ್ತಾನ ಸೇನಾ ಪಡೆಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಭಾರತೀಯ ಸೇನೆಯೂ ತಕ್ಕ ಪ್ರತಿದಾಳಿ ನಡೆಸಿದೆಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.
ಭಾರತ- ಪಾಕ್ ಸೈನಿಕರ ನಡುವೆ ಸುಮಾರು ಹತ್ತು ನಿಮಿಷಗಳ ಕಾಲ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ಭಾರತೀಯ ಸೈನಿಕರಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ಜಮ್ಮು ಮೂಲದ ರಕ್ಷಣಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಮನೀಶ್ ಮೆಹ್ತಾ ಅವರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.