ಪೊಲೀಸ್ ಕಸ್ಟಡಿಯಲ್ಲಿರುವ ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ 
ದೇಶ

ಆಪ್ ನಿಂದ ಜಿತೇಂದ್ರ ಸಿಂಗ್ ತೋಮರ್ ಉಚ್ಚಾಟನೆ ಸಾಧ್ಯತೆ

ನಕಲಿ ಕಾನೂನು ಪದವಿ ಪ್ರಮಾಣ ಪತ್ರ ನೀಡಿರುವ ಜಿತೇಂದ್ರ ಸಿಂಗ್ ತೋಮರ್ ನ್ನು ಪಕ್ಷದಿಂದ ಉಚ್ಛಾಟಿಸುವ ಸಾಧ್ಯತೆ ಇದೆ

ನವದೆಹಲಿ: ನಕಲಿ ಕಾನೂನು ಪದವಿ ಪ್ರಮಾಣ ಪತ್ರ ನೀಡಿದ ಆರೋಪದಡಿ  ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಬಂಧನಕ್ಕೊಳಗಾಗಿರುವುದು ಆಪ್ ಪಕ್ಷದಲ್ಲಿ  ಅಸಮಾಧಾನ  ಮೂಡಿಸಿದೆ.

ಪ್ರಕರಣದಿಂದ ತೀವ್ರ ಆಕ್ರೋಶಗೊಂಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜಿತೇಂದ್ರ ತೋಮರ್ ನನ್ನು ಪಕ್ಷದಿಂದ ಉಚ್ಛಾಟಿಸುವ ಸಾಧ್ಯತೆ  ಇದೆ ಎಂದು ಹೇಳಲಾಗಿದೆ. 
ಮಾಜಿ  ಕಾನೂನು ಸಚಿವ ಜೈಲಿಗೆ ಹೋಗಿರುವುದರಿಂದ ಆಪ್ ಪಕ್ಷಕ್ಕೆ  ತೀವ್ರ  ಮುಜುಗರ ಉಂಟಾಗಿದ್ದು, ಜಿತೇಂದ್ರ ತೋಮರ್ ನನ್ನು ಉಚ್ಛಾಟಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ತಿಳಿದುಬಂದಿದೆ. ಅಲ್ಲದೇ  ಕಾನೂನು ಸಮರ ನಡೆಸುತ್ತಿರುವ  ಆಪ್ ಶಾಸಕನಿಗೆ ಪಕ್ಷದಿಂದ ಯಾವುದೇ ನೆರವು ನೀಡದೇ ಇರಲು ತೀರ್ಮಾನಿಸಲಾಗಿದೆಯಂತೆ.

ಇದೇ ವೇಳೆ ನಕಲಿ ಪದವಿ ಬಗ್ಗೆ  ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಅಧಿಕಾರಿಗಳು ತೋಮರ್ ನನ್ನು  ಬಿಹಾರದ ಭಗಲ್ ಪುರಕ್ಕೆ ಕರೆದೊಯ್ಯಲಿದ್ದಾರೆ. ಜಿತೇಂದ್ರ ತೋಮರ್ ಬಂಧನಕ್ಕೊಳಗಾದ ಪ್ರಾರಂಭದಲ್ಲಿ ದೆಹಲಿ ಸರ್ಕಾರ ತೋಮರ್ ಬೆಂಬಲಕ್ಕೆ ನಿಂತಿತ್ತು, ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ್ದ ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ, ತೋಮರ್ ಅವರನ್ನು ಏಕಾಏಕಿ ಬಂಧಿಸಲು ಅವರೇನು ಭಯೋತ್ಪಾದಕರಾ? ಎಂದು ಪ್ರಶ್ನಿಸಿದ್ದರು. ಆದರೆ ನಕಲಿ ಪದವಿ ಪ್ರಮಾಣ ಪತ್ರ ನೀಡಿರುವ ತೋಮರ್ ಜಾಮೀನು ಅರ್ಜಿ ವಜಾಗೊಂಡ ಬಳಿಕ  ಆಮ್ ಆದ್ಮಿ ಪಕ್ಷದ ವರಸೆ ಬದಲಾಗಿದ್ದು, ಪಕ್ಷದಿಂದ ಉಚ್ಚಾಟಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT