ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್ ನಿಂದ ಗುಂಡಿನ ದಾಳಿ
ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಲೇ ಬಂದಿರುವ ಪಾಕಿಸ್ತಾನ ಶುಕ್ರವಾರ ಪರ್ಗ್ವಾಲ್ ಪ್ರದೇಶದ ಅಖ್ನೂರ್ ಸೆಕ್ಟರ್ ನಲ್ಲಿ ಗುಂಡಿನ ದಾಳಿ ನಡೆಸಿರುವುದಾಗಿ ತಿಳಿದುಬಂದಿದೆ...
ಜಮ್ಮು: ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಲೇ ಬಂದಿರುವ ಪಾಕಿಸ್ತಾನ ಶುಕ್ರವಾರ ಪರ್ಗ್ವಾಲ್ ಪ್ರದೇಶದ ಅಖ್ನೂರ್ ಸೆಕ್ಟರ್ ನಲ್ಲಿ ಗುಂಡಿನ ದಾಳಿ ನಡೆಸಿರುವುದಾಗಿ ತಿಳಿದುಬಂದಿದೆ..
ಇಂದು ಬೆಳಿಗ್ಗೆ 12ರ ಸುಮಾರಿಗೆ ಪರ್ಗ್ವಾಲ್ ಪ್ರದೇಶದ ಅಖ್ನೂರ್ ಸೆಕ್ಟರ್ ನಲ್ಲಿ ಇದ್ದಕ್ಕಿದ್ದಂತೆ ಪಾಕಿಸ್ತಾನದ ಸೈನಿಕರು ದಾಳಿ ನಡೆಸಿದ್ದಾರೆ.
ಇದಕ್ಕೆ ಪ್ರತಿಯಾಗಿ ಭಾರತೀಯ ಸೇನಾ ಪಡೆಗಳು ಪ್ರತಿದಾಳಿ ನಡೆಸಿದ್ದರಿಂದ ಕೆಲ ಕಾಲ ಗುಂಡಿನ ಚಕಚಕಿ ನಡೆದಿದೆ. ದಾಳಿಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.