ಕೇಂದ್ರದ ಮಾಜಿ ಸಚಿವ, ಚಿಕ್ಕಬಳ್ಳಾಪುರದ ಕಾಂಗ್ರೆಸ್ ಸಂಸದ ಎಂ.ವೀರಪ್ಪ ಮೊಯ್ಲಿ 
ದೇಶ

ವೀರಪ್ಪ ಮೊಯ್ಲಿ ಲೇಖನ ಹಿಂಪಡೆದ ದ ಹಿಂದೂ ಪತ್ರಿಕೆ

ಕೇಂದ್ರದ ಮಾಜಿ ಸಚಿವ, ಚಿಕ್ಕಬಳ್ಳಾಪುರದ ಕಾಂಗ್ರೆಸ್ ಸಂಸದ ಎಂ.ವೀರಪ್ಪ ಮೊಯ್ಲಿ ``ದ ಹಿಂದೂ'' ಆಂಗ್ಲ ದಿನಪತ್ರಿಕೆಯ ಜೂ.11ರ ಸಂಚಿಕೆಯಲ್ಲಿ...

ನವದೆಹಲಿ: ಕೇಂದ್ರದ ಮಾಜಿ ಸಚಿವ, ಚಿಕ್ಕಬಳ್ಳಾಪುರದ ಕಾಂಗ್ರೆಸ್ ಸಂಸದ ಎಂ.ವೀರಪ್ಪ ಮೊಯ್ಲಿ ``ದ ಹಿಂದೂ'' ಆಂಗ್ಲ ದಿನಪತ್ರಿಕೆಯ ಜೂ.11ರ ಸಂಚಿಕೆಯಲ್ಲಿ ಬರೆದ ಲೇಖನವನ್ನು ಅದರ ಇಂಟರ್ನೆಟ್ ಆವೃತ್ತಿಯಿಂದ ಹಿಂಪಡೆಯಲಾಗಿದೆ.

ಈ ಬಗ್ಗೆ ಪತ್ರಿಕೆಯ ಅಂತರ್ಜಾಲ ಆವೃತ್ತಿಯಲ್ಲಿ ಹೇಳಿಕೆ ಪ್ರಕಟಿಸಲಾಗಿದೆ. ಪತ್ರಿಕೆಯಲ್ಲಿ ಮೊಯ್ಲಿ ಬರೆದಿರುವ ಲೇಖನ ಕೃತಿಚೌರ್ಯ ಮಾಡಿ ಬರೆದದ್ದಾಗಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದೂ ಪತ್ರಿಕೆಯ ಸಂಪಾದಕೀಯ ಮಂಡಳಿ ತಿಳಿಸಿದೆ. `ವೆಲ್ಫೇರ್ ಟು ಪೇಟರ್ನಲಿಸಮ್' ಎಂಬ ಶಿರೋನಾಮೆಯಲ್ಲಿ ಮೊಯ್ಲಿ ಲೇಖನ ಬರೆದಿದ್ದರು. ಮೇ ನಲ್ಲಿ ಲೇಖಕ ಜಿ.ಸಂಪತ್ ಅವರು ಅದೇ ಲೇಖನ ಬರೆದಿದ್ದರು. ಅದು ಅದೇ ತಿಂಗಳ 26ರಂದು ``ದ ಹಿಂದೂ'' ಪತ್ರಿಕೆಯಲ್ಲಿ ಪ್ರಕಟವಾಗಿತ್ತು. ಮೊಯ್ಲಿಯವರು ಆ ಲೇಖನದಲ್ಲಿ ಕೊಂಚ ಮಾರ್ಪಾಡು ಮಾಡಿ ಮತ್ತೆ ``ದ ಹಿಂದೂ''ಗೆ ಕಳುಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT