ಮೋಹನ್ ಭಾಗವತ್ 
ದೇಶ

ಬಾಂಗ್ಲಾ, ಪಾಕಿಸ್ತಾನ ಸಹ ಹಿಂದೂ ರಾಷ್ಟ್ರ: ಮೋಹನ್ ಭಾಗವತ್

ಬಾಂಗ್ಲಾದೇಶ ಹಾಗೂ ಪಾಕಿಸ್ತಾನ ಸಹ ಹಿಂದೂ ರಾಷ್ಟ್ರಗಳು ಎಂದು ತಾನು ನಂಬುವುದಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ ಎಸ್ಎಸ್) ದ

ಮಥುರಾ: ಬಾಂಗ್ಲಾದೇಶ ಹಾಗೂ ಪಾಕಿಸ್ತಾನ ಸಹ ಹಿಂದೂ ರಾಷ್ಟ್ರಗಳು ಎಂದು ತಾನು ನಂಬುವುದಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ ಎಸ್ಎಸ್) ದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಹೇಳಿರುವುದಾಗಿ ಇಂಡಿಯಾ  ಟುಡೇ ವರದಿ ಮಾಡಿದೆ.

ಇಂಡಿಯಾ ಟುಡೇ ವರದಿ ಪ್ರಕಾರ, ಮಥುರಾದ ಶ್ರೀಜಿ ಬಾಬಾ ಸರಸ್ವತಿ ಶಿಶು ಮಂದಿರದಲ್ಲಿನ ಸಂಘದ ತರಬೇತಿ ಶಿಬಿರದಲ್ಲಿ ಮಾತನಾಡಿದ ಭಾಗವತ್, ಭಾರತದ ಭೂಖಂಡ ಹಿಂದೂ ದೇಶವಾಗಿದೆ. ಹಾಗಾಗಿ ಬಾಂಗ್ಲಾ, ಪಾಕಿಸ್ತಾನಗಳಲ್ಲಿ ವಾಸಿಸುವ ಜನರು ಕೂಡಾ ಹಿಂದೂ ದೇಶದ ಭಾಗವಾಗಿದ್ದಾರೆ ಎಂದು ಹೇಳಿದ್ದಾರೆ.

ಭಾರತ ಹಿಂದೂ ರಾಷ್ಟ್ರ ಎಂಬುದರಲ್ಲಿ ಯಾವುದೇ ಅನುಮಾನ ಇಲ್ಲ. ಏನೇ ಆಗಲಿ ನಾವು ಈ ನಂಬಿಕೆಯನ್ನು ಹುಸಿಗೊಳಿಸಲು ಬಿಡುವುದಿಲ್ಲ ಎಂದು ಭಾಗವತ್ ವಿಶ್ವಾಸವ್ಯಕ್ತಪಡಿಸಿದ್ದಾರೆ.

ಜಗತ್ತಿನ ವಿವಿಧೆಡೆ ಜನರು ಆಯಾ ದೇಶಗಳ ನಾಗರಿಕರಾಗಿ ವಾಸಿಸುತ್ತಿದ್ದಿರಬಹುದು. ಆದರೆ ಅವರ ರಾಷ್ಟ್ರೀಯತೆ ಹಿಂದೂವಾಗಿದ್ದು, ಜನರು ಅದನ್ನು ನಿರ್ಲಕ್ಷಿಸುತ್ತಿದ್ದಾರೆ. ತಮ್ಮನ್ನು ತಾವು ಮುಸ್ಲಿಮ್, ಕ್ರಿಶ್ಚಿಯನ್ ಅಂತ ಹೇಳಿಕೊಳ್ಳುತ್ತಾರೆ. ಈ ಭರತ ಖಂಡದ ಪುರಾತನ ಹೆಸರು ಹಿಂದೂಸ್ತಾನ್ ಆಗಿತ್ತು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!