ನೊಯ್ಡಾ: ಉತ್ತರ ಪ್ರದೇಶದ ಗ್ರೇಟರ್ ನೊಯ್ಡಾದ ಗಾರ್ಮೆಂಟ್ಸ್ ಫ್ಯಾಕ್ಟರಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿರುವುದಾಗಿ ಶನಿವಾರ ತಿಳಿದುಬಂದಿದೆ.
ನೊಯ್ಡಾದ ಸೆಕ್ಟರ್ 46 ಪ್ರದೇಶದಲ್ಲಿನ ಗಾರ್ಮೆಂಟ್ಸ್ ಫ್ಯಾಕ್ಟರಿಯೊಂದರಲ್ಲಿ ಇಂದು ಬೆಳಿಗ್ಗೆ 4 ಗಂಟೆ ಸುಮಾರಿಗೆ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಂತರ ಹೊಗೆಯಂತೆ ಕಂಡ ಬೆಂಕಿ ಸಮಯವಾಗುತ್ತಿದ್ದಂತೆ ಇಡೀ ಕಾರ್ಖಾನಗೆ ಹಬ್ಬಿದೆ. ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ 12 ಅಗ್ನಿಶಾಮಕ ವಾಹನಗಳು ಮತ್ತು ಅಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಕಿದ್ದಾರೆ.
ಕಾರ್ಖಾನೆ ಸುತ್ತಲೂ ದಟ್ಟವಾದ ಬೆಂಕಿ ಆವರಿಸಿರುವುದರಿಂದ ಬೆಂಕಿ ನಂದಿಸುವ ಕಾರ್ಯಾಚರಣೆಗೆ ತೊಡಕು ಉಂಟಾಗುತ್ತಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹರಸಾಹಸ ಪಡುತ್ತಿದೆ. ಕಾರ್ಖಾನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ವಸ್ತುಗಳು ಕರಲಾಗಿದ್ದು, ಭಾರಿ ನಷ್ಟ ಸಂಭವಿಸಿರುವುದಾಗಿ ಹೇಳಲಾಗುತ್ತಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿರುವಂತೆ ತಿಳಿದುಬಂದಿಲ್ಲ.