ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ 
ದೇಶ

ಧೈರ್ಯವಿದ್ದರೆ ಅಜಂಖಾನ್ 'ಜೈ ಶ್ರೀರಾಮ್' ಎಂದು ಹೇಳಲಿ: ಸಾಕ್ಷಿ ಮಹಾರಾಜ್

ನಮಾಜ್ ಮಾಡುವಂತೆ ಯೋಗಿ ಆದಿತ್ಯನಾಥ್ ಗೆ ಸಲಹೆ ನೀಡಿದ ಸಮಾಜವಾದಿ ಪಕ್ಷದ ಮುಖಂಡ ಅಜಂಖಾನ್ ಅವರಿಗೆ ತಿರುಗೇಟು ನೀಡಿರುವ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್, ಧೈರ್ಯವಿದ್ದರೆ ಅಜಂಖಾನ್ ಜೈ ಶ್ರೀರಾಮ್ ಎಂದು ಹೇಳಲಿ ಎಂದು ಭಾನುವಾರ ತಿರುಗೇಟು ನೀಡಿದ್ದಾರೆ...

ನವದೆಹಲಿ: ನಮಾಜ್ ಮಾಡುವಂತೆ ಯೋಗಿ ಆದಿತ್ಯನಾಥ್ ಗೆ ಸಲಹೆ ನೀಡಿದ ಸಮಾಜವಾದಿ ಪಕ್ಷದ ಮುಖಂಡ ಅಜಂಖಾನ್ ಅವರಿಗೆ ತಿರುಗೇಟು ನೀಡಿರುವ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್, ಧೈರ್ಯವಿದ್ದರೆ ಅಜಂಖಾನ್ ಜೈ ಶ್ರೀರಾಮ್ ಎಂದು ಹೇಳಲಿ ಎಂದು ಭಾನುವಾರ ತಿರುಗೇಟು ನೀಡಿದ್ದಾರೆ.

ಈ ಕುರಿತಂತೆ ಉನ್ನಾವೋದಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ನಾವು ಭಾರತೀಯ ಸಂಸ್ಕೃತಿ ಹಾಗೂ ಧರ್ಮವನ್ನು ಅನುಸರಿಸುವವರು, ಭಾರತೀಯ ಸಂಸ್ಕೃತಿಯಲ್ಲಿ ಅಲ್ಲಾಹ, ಭಗವಾನ್ ಅಥವಾ ಯಾವುದೇ ದೇವರಾದರೂ ಭಿನ್ನತೆ ಎಂಬುದಿಲ್ಲ. ನಾವು ಅಲ್ಲಾಹ ಹೋ ಅಕ್ಬರ್ ಎಂದು ಹೇಳುತ್ತೇವೆ. ಧೈರ್ಯವಿದ್ದರೆ ಅಜಂಖಾನ್ ಅವರು ಜೈ ಶ್ರೀರಾಮ್ ಎಂದು ಹೇಳಲಿ ಎಂದು ಹೇಳಿದ್ದಾರೆ.  

ಯೋಗ ದಿನದಂದು ಸೂರ್ಯ ನಮಸ್ಕಾರ ಮಾಡುವ ಕುರಿತಂತೆ  ಭಾರತ ಮುಸ್ಲಿಮರ ವೈಯಕ್ತಿಕ ಕಾನೂನು ಮಂಡಳಿ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಈ ಕುರಿತಂತೆ ಪ್ರತಿಕ್ರಿಯೆ ನೀಡಿದ್ದ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಸೂರ್ಯ ನಮಸ್ಕಾರ ಮಾಡುವುದರಿಂದ ಆರೋಗ್ಯ ಮತ್ತು ಮನಸ್ಸು ಶುದ್ಧಗೊಳ್ಳುತ್ತದೆ. ಇಂತಹ ಆರೋಗ್ಯಕರ ಯೋಗದ ಭಾಗವಾಗಿರುವ ಸೂರ್ಯ ನಮಸ್ಕಾರವನ್ನು ವಿರೋಧಿಸುವ ಜನರು ಸಮುದ್ರದಲ್ಲಿ ಬೀಳಲಿ ಇಲ್ಲವೇ ಭಾರತ ಬಿಟ್ಟು ಹೋಗಲಿ ಎಂದು ಹೇಳಿದ್ದರು.

ಯೋಗಿ ಆದಿತ್ಯನಾಥ್ ಅವರ ಈ ಹೇಳಿಕೆ ವಾಗ್ಧಾಳಿ ನಡೆಸಿದ್ದ ಸಮಾಜವಾದಿ ಪಕ್ಷದ ಮುಖಂಡ ಅಜಂಖಾನ್ ಅವರು, ಉತ್ತಮ ಮಾನಸಿಕ ಆರೋಗ್ಯಕ್ಕಾಗಿ ಯೋಗಿ ಆದಿತ್ಯನಾಥ್ ಅವರು ನಮಾಜ್ ಮಾಡಲಿ. ಎಲ್ಲಿಯವರೆಗೂ ಸೂರ್ಯ ನಮಸ್ಕಾರ ಮಾಡಬೇಕು ಎಂದು ನಮ್ಮನ್ನು ಒತ್ತಾಯಿಸುತ್ತಾರೋ, ಅಲ್ಲಿಯವರೆಗೂ ನಾನು ನಮಾಜ್ ಮಾಡುಂತೆ ಒತ್ತಾಯಿಸುತ್ತೇನೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel