ನರೇಂದ್ರ ಮೋದಿ ಹೆಸರಿನಲ್ಲಿ ಬಿಹಾರ ಚುನಾವಣೆ ಎದುರಿಸಲಿರುವ ಬಿಜೆಪಿ 
ದೇಶ

ಮೋದಿ ಹೆಸರಿನಲ್ಲಿ ಬಿಹಾರ ಚುನಾವಣೆಯಲ್ಲಿ ಸ್ಪರ್ಧೆ: ಬಿಜೆಪಿ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹೆಸರಿನಲ್ಲಿ ಬಿಹಾರ ಚುನಾವಣೆಯನ್ನು ಎದುರಿಸುವುದಾಗಿ ಬಿಜೆಪಿ ಘೋಷಿಸಿದೆ...

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹೆಸರಿನಲ್ಲಿ ಬಿಹಾರ ಚುನಾವಣೆಯನ್ನು ಎದುರಿಸುವುದಾಗಿ ಬಿಜೆಪಿ ಘೋಷಿಸಿದೆ. ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ಘೋಷಿಸುವುದಿಲ್ಲ ಎಂದು ಬಿಹಾರ ಚುನಾವಣೆ ಉಸ್ತುವಾರಿ ವಹಿಸಿಕೊಂಡಿರುವ ಕೇಂದ್ರ ಸಚಿವ ಅನಂತ್ ಕುಮಾರ್ ತಿಳಿಸಿದ್ದಾರೆ.

ಬಿಜೆಪಿ ಈಗ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ಘೋಷಿಸುವುದಿಲ್ಲ. ಬಿಜೆಪಿಯಲ್ಲಿ ಅನೇಕ ಪ್ರಮುಖ ನಾಯಕರಿದ್ದಾರೆ. ನರೇಂದ್ರ ಮೋದಿಯವರು ಬಿಜೆಪಿಯ ಮುಖವಾಗಿದ್ದು, ಅವರ ನಾಯಕತ್ವದಡಿಯಲ್ಲಿ ಚುನಾವಣೆಯನ್ನು ಎದುರಿಸುವುದಾಗಿ ತಿಳಿಸಿದರು.

ಬಿಜೆಪಿ ಸಹ ಮುಖ್ಯಮಂತ್ರಿ ಹೆಸರನ್ನು ಘೋಷಿಸಬೇಕೆಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರ ಒತ್ತಾಯವನ್ನು ಅನಂತ್ ಕುಮಾರ್ ತಳ್ಳಿ ಹಾಕಿದರು.

ಬಿಜಿಪಿಯ ಮೈತ್ರಿ ಪಕ್ಷ ರಾಷ್ಟ್ರೀಯ ಲೋಕ ಸಮತಾ ಪಕ್ಷದ ಮುಖ್ಯಸ್ಥ ಕೇಂದ್ರ ಸಚಿವ ಉಪೇಂದ್ರ ಕುಶ್ವಹ ಅವರ ಹೆಸರನ್ನು ಘೋಷಿಸಬೇಕೆಂದು ಹೇಳಿತ್ತು. ಬಿಜೆಪಿಯ ಇನ್ನೊಂದು ಮೈತ್ರಿಕೂಟ ರಾಮ್ ವಿಲಾಸ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ, ಪಾಸ್ವಾನ್ ಅವರು ಮುಖ್ಯಮಂತ್ರಿ ಅಭ್ಯರ್ಥಿ ಅಲ್ಲ ಎಂದು ಹೇಳಿದೆ. ಕಳೆದ ವಾರ ಬಿಜೆಪಿ ಜೊತೆ ಸೇರಿಕೊಂಡ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಂಜಿ ಅವರು ಕೂಡ ತಾವು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಲ್ಲ ಎಂದು ತಿಳಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!